ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡುತ್ತಾ, ಹಳ್ಳಿಯ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಮಹತ್ವದ ಉದ್ದೇಶದಿಂದ ಜ್ಞಾನ ದೀಪ ಶಿಕ್ಷಕರ ನೇಮಕ ಮಾಡಿಕೊಳ್ಳುತ್ತಿದ್ದಾರೆ. ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರತಿವರ್ಷ ಶಿಕ್ಷಕರನ್ನ ನೀಡುತ್ತಿರುವುದು ಅನೇಕ ಶಾಲೆಗಳಿಗೆ ತುಂಬಾ ಸಹಾಯಕವಾಗಿದೆ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ವತಿಯಿಂದ ಬೈಂದೂರು ತಾಲೂಕಿಗೆ ಆಯ್ಕೆಗೊಂಡ ಶಾಲೆಗಳ ಜ್ಞಾನ ದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ಬೈಂದೂರು ಕ್ಷೇತ್ರ ಯೋಜನಾಧಿಕಾರಿ ನಾಗೇಶ್ ನಾಯ್ಕ್ ಮಾತನಾಡಿದರು. ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ್ ಸುವರ್ಣ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸುಧಾಕರ್ ಆಚಾರ್ಯ, ಪ್ರಗತಿ ಬಂದು ಸ್ವಸಾಯ ಸಂಘಗಳ ಒಕ್ಕೂಟಗಳ ಕೇಂದ್ರ ಸಮಿತಿ ಅಧ್ಯಕ್ಷ ವಾಸು ಮೇಸ್ತ, ಭಜನಾ ಪರಿ?ತ್ ಉಪಾಧ್ಯಕ್ಷ ಮಂಜು ಪೂಜಾರಿ, ಜನ ಜಾಗೃತಿ ವೇದಿಕೆ ಸದಸ್ಯ ದಯಾನಂದ್ ಬಳೆಗಾರ್, ಉತ್ತರ ಕನ್ನಡ ಜಿಲ್ಲೆಯ ನಿರ್ದೇಶಕಿ ನಾಗರತ್ನ ಹೆಗಡೆ, ಬೈಂದೂರು ತಾಲೂಕು ಯೋಜನಾಧಿಕಾರಿ ಸಂಜಯ ನಾಯಕ್, ಶಿಕ್ಷಕರು, ಸೇವಾ ಪ್ರತಿನಿಧಿಗಳು, ಮೇಲ್ವಿಚಾರಕರು, ಉಪಸಿತರಿದ್ದರು.











