ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಜೆನ್ನಿಫರ್ ಫ್ರೀಡಾ ಮೆನೆಜಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವಿದ್ಯಾರ್ಥಿಗಳಿಂದ ಪ್ರದರ್ಶಿಸಲಾದ ಸಾಂಪ್ರದಾಯಿಕ ತಿರುವಾತಿರಂ ನೃತ್ಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ನಂತರ ವಿವಿಧ ಮನರಂಜನಾತ್ಮಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.
ಅನುಮೋಲ್, ಆಸಿಫ್ ಹಾಗೂ ಹೀನಾ ಅವರು ಓಣಂ ಹಬ್ಬದ ಮಹತ್ವವನ್ನು ತಿಳಿಸಿದರು. ಪವಿತ್ರಾ ಅವರು ಕಾರ್ಯಕ್ರಮವನ್ನು ಸಂಯೋಜಿಸಿದರು. ಆಯಿಷಾ ರಫೀದಾ ನಿರೂಪಿಸಿದರು.
















