ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ದೇಶದ ಐಕ್ಯತೆ, ಸಮಗ್ರತೆ ಮತ್ತು ರಾಷ್ಟ್ರೀಯತೆಯ ಜಾಗೃತಿಗಾಗಿ ಬೈಂದೂರಿನಲ್ಲಿ “ಹಿಂದು ಜಾಗರಣ ವೇದಿಕೆ”ವತಿಯಿಂದ ಆಯೋಜಿಸಲಾಗಿದ್ದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ನಡೆದ ಬೃಹತ್ ಪಂಜಿನ ಮೆರವಣಿಗೆ ಹಾಗೂ ದೇಶಭಕ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು.

ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಹಿಂದೂ ಸಂಘಟನೆಗಳ ಪ್ರಮುಖರು, ದೇಶಪ್ರೇಮಿ ಯುವಕರು ಹಾಗೂ ಸಾರ್ವಜನಿಕರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಂಡು ರಾಷ್ಟ್ರೀಯತೆಯ ಸಂದೇಶ ಸಾರಿದ್ದು ಅತ್ಯಂತ ಹೆಮ್ಮೆಯ ವಿಷಯ.
ದೇಶದ ಅಖಂಡತೆ ಮತ್ತು ಸ್ವಾಭಿಮಾನವನ್ನು ಎತ್ತಿಹಿಡಿಯಲು ಯುವಜನತೆ ಸದಾ ಮುಂಚೂಣಿಯಲ್ಲಿರಬೇಕು. ಈ ನಿಟ್ಟಿನಲ್ಲಿ ಆಯೋಜಿತವಾದ ಈ ಕಾರ್ಯಕ್ರಮವು ಯುವ ಮನಸ್ಸುಗಳಲ್ಲಿ ದೇಶಭಕ್ತಿಯ ಕಿಚ್ಚನ್ನು ಹೆಚ್ಚಿಸಿದೆ.











