Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು: ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ
    ಊರ್ಮನೆ ಸಮಾಚಾರ

    ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು: ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ​ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು ವತಿಯಿಂದ ‘ಅಖಂಡ ಭಾರತ ಸಂಕಲ್ಪ ದಿನ’ದ ಪ್ರಯುಕ್ತ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸುವ ಹಾಗೂ ಸಮಾಜದಲ್ಲಿ ರಾಷ್ಟ್ರೀಯತೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ಭವ್ಯವಾದ ಪಂಜಿನ ಮೆರವಣಿಗೆ ಹಾಗೂ ವಿಶೇಷ ಸಭಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು.

    Click Here

    Call us

    Click Here

    ​ಅಖಂಡ ಭಾರತ ಸಂಕಲ್ಪದ ಮುಖ್ಯ ಉದ್ದೇಶ ವಿಭಜನೆಯ ಕಹಿ ನೆನಪುಗಳನ್ನು ಮೆಲುಕು ಹಾಕುತ್ತಾ, ದೇಶದ ಐಕ್ಯತೆ, ಸಮಗ್ರತೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವುದು ಅಖಂಡ ಭಾರತ ಸಂಕಲ್ಪ ದಿನದ ಮುಖ್ಯ ಉದ್ದೇಶವಾಗಿದೆ. ಭವಿಷ್ಯದ ಯುವಪೀಳಿಗೆಗೆ ದೇಶದ ಇತಿಹಾಸ, ದೇಶಕ್ಕಾಗಿ ತ್ಯಾಗ-ಬಲಿದಾನಗೈದ ಮಹಾನ್ ವೀರರ ಆದರ್ಶಗಳನ್ನು ತಲುಪಿಸುವುದು ಹಾಗೂ ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಗೊಳಿಸುವುದು ಇದರ ಪ್ರಮುಖ ಆಶಯವಾಗಿದೆ ಎಂದು ಕೇಶವ್ ಬಂಗೇರ ಅವರು ತಿಳಿಸಿದರು.

    ​ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಆಗಮಿಸಿದ್ದ ಶ್ರೀ ಕೇಶವ್ ಬಂಗೇರ ಅವರು ಮಾತನಾಡಿ, ಇಂದಿನ ಜೆನ್-ಜಿ (Gen Z) ಮತ್ತು ಜೆನ್-ಆಲ್ಫಾ (Gen Alpha) ಯುವಪೀಳಿಗೆಯು ಕೆಲವೊಮ್ಮೆ ದಾರಿ ತಪ್ಪುವ ಪ್ರವೃತ್ತಿ ಹಾಗೂ ದೇಶವಿರೋಧಿ ಚಟುವಟಿಕೆಗಳನ್ನು ನೋಡುವಾಗ, ಅದೇ ವಯಸ್ಸಿನಲ್ಲಿ ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿದ ಅಮರ ಕ್ರಾಂತಿಕಾರಿ ಭಗತ್ ಸಿಂಗ್ ಮತ್ತು ಅಂದಿನ ಕಾಲದ ಇತರ ಯುವ ಹೋರಾಟಗಾರರ ಅಮುಲ್ಯ ತ್ಯಾಗ-ಬಲಿದಾನಗಳನ್ನು ಪ್ರತಿಯೊಬ್ಬರೂ ಸ್ಮರಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಯುವಕರು ದೇಶಪ್ರೇಮವನ್ನು ಮೈಗೂಡಿಸಿಕೊಂಡು ದೇಶದ ರಕ್ಷಣೆ ಮತ್ತು ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕೆಂದು ಅವರು ವಿಶೇಷವಾಗಿ ಒತ್ತಿ ಹೇಳಿದರು.

    ಈ ಅರ್ಥಪೂರ್ಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರಾದ ನಾಗರಾಜ್ ಗೋಳಿಹೊಳೆ ಅವರು ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು ಹಾಗೂ ಸಂಘಟನೆಯ ಹಿರಿಯರು ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು. ಪ್ರಮುಖ ಭಾಷಣಕಾರರಾಗಿ  ಕೇಶವ್ ಬಂಗೇರ, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕರಾದ ರಾಜೇಶ್ ಉಚ್ಚೀಲ,  ಸಂಘಟನಾ ಹಿರಿಯರಾದ ಅರವಿಂದ್ ಕೋಟೇಶ್ವರ್, ಶಂಕರ್ ಕೋಟ, ವಾಸು ಗಂಗೊಳ್ಳಿ, ಮಹೇಶ್ ಬೈಲೂರು, ಉಮೇಶ್ ಸೂಡ,ರತ್ನಕರ ಗಂಗೋಳ್ಳಿ, ರಾಜೇಶ್ ಆಚಾರ್ಯ ಬೈಂದೂರು, ಬೈಂದೂರು ತಾಲೂಕು ಸಂಯೋಜಕರಾದ ಹರೀಶ್ ಸಳ್ಕೋಡು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಸಂಸದರಾದ ಬಿ. ವೈ ರಾಘವೇಂದ್ರ ಹಾಗೂ  ಶಾಸಕರಾದ ಗುರುರಾಜ್ ಗಂಟಿಹೊಳೆಯವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    ಪಂಜಿನ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಹಾಗೂ ದೇಶಪ್ರೇಮಿಗಳು ಉತ್ಸಾಹದಿಂದ ಪಾಲ್ಗೊಂಡು ಭಾರತ್ ಮಾತಾ ಕೀ ಜೈ ಘೋಷಣೆಗಳೊಂದಿಗೆ ಮೆರವಣಿಗೆಯನ್ನು ಯಶಸ್ವಿಗೊಳಿಸಿದರು. ಈ ಕಾರ್ಯಕ್ರಮವು ಯುವ ಜನತೆಯಲ್ಲಿ ದೇಶಭಕ್ತಿಯ ಕಿಚ್ಚನ್ನು ಹೊತ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸಿತು.

    ಪಂಜಿನ ಮೆರವಣಿಗೆ ಕಾರ್ಯಕ್ರಮದ ಚಾಲನೆ ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು ಹಿರಿಯ ಕಾರ್ಯಕರ್ತರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿದಿಯನ್ನು ಮಹೇಶ್ ವಸ್ರೆ ಬೋಧಿಸಿದರು, ವಂದೇ ಮಾತರಂ ಗೀತಿಯನ್ನು ಕುಮಾರಿ ಜಾಹ್ನವಿ ಆಚಾರ್ಯ ಹಾಡಿದರು, ವಿಜೇತ್ ಬಂಕೇಶ್ವರ್ ಕಾರ್ಯಕ್ರಮ ನಿರೂಪಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಲಿಗ್ರಾಮ ಶ್ರೀ ಗುರು ನರಸಿಂಹನ ಸನ್ನಿಧಿಯಲ್ಲಿ 2ನೇ ಶ್ರಾವಣ ಮಾಸದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

    24/08/2026

    ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಓಣಂ ಆಚರಣೆ

    24/08/2026

    ಸೀತೆಯ ಅಗ್ನಿಜಯಕ್ಕೆ ಆಕೆಯ ಆಹಾರ ಕ್ರಮವೇ ಕಾರಣ: ಶ್ರೀ ರಾಘವೇಶ್ವರ

    24/08/2026
    Leave A Reply Cancel Reply

    nineteen − 11 =

    Call us

    Click Here

    Call us

    Call us

    Call us
    Highest Viewed Recently
    • ಹಿಂದೂ ಜಾಗರಣ ವೇದಿಕೆ ಬೈಂದೂರು ತಾಲೂಕು: ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆ
    • ಸಾಲಿಗ್ರಾಮ ಶ್ರೀ ಗುರು ನರಸಿಂಹನ ಸನ್ನಿಧಿಯಲ್ಲಿ 2ನೇ ಶ್ರಾವಣ ಮಾಸದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ
    • ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಓಣಂ ಆಚರಣೆ
    • ಸೀತೆಯ ಅಗ್ನಿಜಯಕ್ಕೆ ಆಕೆಯ ಆಹಾರ ಕ್ರಮವೇ ಕಾರಣ: ಶ್ರೀ ರಾಘವೇಶ್ವರ
    • ಕುಂದಾಪುರ ಕನ್ನಡ ಪ್ರತಿಷ್ಠಾನ ಬೈಂದೂರು: ʼಕೆಸ್ರಲೊಂದಿನ ಗಮ್ಮತ್ತ್ʼ ಕಾರ್ಯಕ್ರಮ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.