ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಪ್ಲೇಸ್ ಮೆಂಟ್ ಘಟಕ ಹಾಗೂ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಮೂರು ದಿನಗಳ ಸಾಪ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಸಂಚಾಲಕರಾದ ಅನುಪಮಾ ಎಸ್. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಸಮಗ್ರವಾಗಿ ಅಭಿವೃದ್ಧಿಯಾಗಬೇಕಾದರೆ ಇಂತಹ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸದಾಗ ಮಾತ್ರ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ, ನಾಯಕತ್ವ ಗುಣ, ಉತ್ತಮ ಸಂವಹನ ಹಾಗೂ ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಲು ಸಹಾಯ ಮಾಡುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮ್ಯಾಜಿಕ್ ಬಸ್ ಫೌಂಡೇಶನ್ ಕಾರ್ಯಕ್ರಮದ ವ್ಯವಸ್ಥಾಪಕ ಡಾ. ಹರೀಶ್, ಕಾಲೇಜಿನ ಆಡಳಿತ ಅಧಿಕಾರಿ ಡಾ. ಮೋಹನ ಕೆ.ಎನ್. ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಘಟಕದ ಸಂಯೋಜಕರಾದ ಸಂದೀಪ್ ಕೆ. ಸ್ವಾಗತಿಸಿದರು. ಆಂಗ್ಲಭಾಷಾ ಉಪನ್ಯಾಸಕಿ ಶ್ವೇತಾ ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಡಾ. ವಿಶ್ವನಾಥ ಆಚಾರ್ಯ ಕಾರ್ಯಕ್ರಮ ಆಯೋಜಿಸಿದರು. ಡಾ. ಮೋಹನ ಕೆ. ಎನ್. ಧನ್ಯವಾದಗೈದರು.
















