Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯೋಗಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಪಕ್ಷಪಾತವಿಲ್ಲ, ಕಾಳಜಿಯಷ್ಟೇ ಇದೆ: ಶ್ರೀ ರಾಘವೇಶ್ವರ
    ಊರ್ಮನೆ ಸಮಾಚಾರ

    ಯೋಗಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಪಕ್ಷಪಾತವಿಲ್ಲ, ಕಾಳಜಿಯಷ್ಟೇ ಇದೆ: ಶ್ರೀ ರಾಘವೇಶ್ವರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗೋಕರ್ಣ:
    ಔಷಧಿಯ ಅಂಗಡಿಯಲ್ಲಿ ಎಲ್ಲಾ ಔಷಧಗಳನ್ನೂ ಎಲ್ಲರಿಗೂ ಕೊಡುವುದಿಲ್ಲ. ಕೆಲವು ಔಷಧಗಳನ್ನು ವೈದ್ಯರಿಂದ ಸೂಕ್ತ ಚೀಟಿಯನ್ನು ಹೊಂದಿದವರಿಗಷ್ಟೇ ನೀಡಲಾಗುತ್ತದೆ. ಹಾಗೆಯೇ ಕೆಲವು ಔಷಧಗಳಿಗೆ ಅದನ್ನು ಮಕ್ಕಳಿಗೆ ನೀಡುವಂತಿಲ್ಲ ಎಂಬ ನಿಯಮಗಳಿರುತ್ತದೆ. ಹಾಗೆಯೇ ಎಲ್ಲಾ ಯೋಗ – ಪ್ರಾಣಾಯಾಮಗಳನ್ನು ಎಲ್ಲರೂ ಮಾಡಬಾರದು. ಪ್ರತಿಯೊಂದಕ್ಕೂ ಅದರದ್ದೇ ಆದ ನಿಯಮಗಳಿವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

    Click Here

    Call us

    Click Here

    ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಸೋಮವಾರದಂದು ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಅಮೃತಾಹಾರವೆಂಬ ಯೋಗ ಸೂಕ್ಷ್ಮದ ಕುರಿತಾಗಿ ಪ್ರವಚನವನ್ನು ಅನುಗ್ರಹಿಸುತ್ತಾ, ಯೋಗ ಸೂಕ್ಷ್ಮವಾದ ಅಮೃತಪಾನವನ್ನು ಸಿದ್ಧಿಸಿಕೊಂಡವನಿಗೆ ತಕ್ಷಕ ಸರ್ಪದ ಮಹಾವಿಷದಿಂದಲೂ ಕೂಡ ಏನೂ ಆಗದು. ಒಮ್ಮೆ ಈ ಅಮೃತವನ್ನು ಆಸ್ವಾದಿಸಲು ಕಲಿತ ಯೋಗಿಯು ಮತ್ತೆ ಮತ್ತೆ ಅದನ್ನು ಬಯಸುತ್ತಾನೆ. ಈ ಅಮೃತದ ಆಸ್ವಾದನೆಗೆ ಸಮಾನವಾದದ್ದು ಯಾವುದೂ ಇಲ್ಲ ಎಂದ ಶ್ರೀಗಳು, ಜಾಲಂಧರ ಬಂಧ, ಮೂಲಬಂಧ, ಖೇಚರಿ, ವಿಪರೀತ ಕರಣಿ ಮುಂತಾದವುಗಳ ಕುರಿತು ವಿವರಿಸಿದರು.

    ಮೂಲಬಂಧದ ಮೂಲಕ ಕುಂಡಲಿನೀ ಶಕ್ತಿಯ ಜಾಗೃತಿ ಪ್ರಕ್ರಿಯೆಯ ಯೋಗ ಸೂಕ್ಷ್ಮಗಳನ್ನು ವಿವರಿಸಿದ ಶ್ರೀಗಳು, ಮೂಲಬಂಧದ ವಿವರ, ಕುಂಡಲಿನೀ ಜಾಗೃತಿಯ ಮಾರ್ಗ, ಅದು ಜಾಗೃತವಾದಾಗ ಉಂಟಾಗುವ ಪ್ರಯೋಜನಗಳ ಕುರಿತಾಗಿ ಮಾಹಿತಿ ನೀಡಿದರು. ಈ ಪ್ರಕ್ರಿಯೆಯು ನಮ್ಮನ್ನು ಮೋಕ್ಷದೆಡೆಗೆ ಕರೆದೊಯ್ಯುತ್ತದೆ ಹಾಗೂ ಮೋಕ್ಷವೇ ಜೀವಿಯ ಪರಮ ಗುರಿ ಎಂದು ತಿಳಿಸಿದರು.

    ಭಾರತೀಯ ಗ್ರಾನೈಟ್ ಮತ್ತು ಕಲ್ಲು ಕೈಗಾರಿಕೆಗಳ ಒಕ್ಕೂಟದ ಉಪಾಧ್ಯಕ್ಷ ಜಿ. ಎಮ್ ಹೆಗಡೆ, ನಿವೃತ್ತ ಪೊಲೀಸ್ ಆಯುಕ್ತ ಟಿ.ಜಿ. ಕೃಷ್ಣ ಭಟ್ IPS ಉಪಸ್ಥಿತರಿದ್ಧು ಶ್ರೀಗಳ ಆಶೀರ್ವಾದ ಪಡೆದರು. ಯುನೈಟೆಡ್ ಕಿಂಕಡಮ್ (UK)  ಹವ್ಯಕ ವಲಯದ ಪರವಾಗಿ ವಿವೇಕ ಭಟ್ ಮತ್ತು ಕುಟುಂಬದವರು ಗುರುಭಿಕ್ಷಾ ಸೇವೆಯನ್ನು ಸಮರ್ಪಿಸಿದರು. ದಿನಪ್ರಧಾನರಾದ ರಮಾನಂದ ಹೊಸ್ಮನೆ ದಂಪತಿಗಳು, ಸುರೇಶ್ ಭಟ್ ಆಡುಗೋಡಿ, ದಿನೇಶ್ ಹೆಗಡೆ, ನರಸಿಂಹ ಭಟ್ಟ ಬಡಗು, ಡಾ. ರವಿ ಪಾಂಡವಪುರ, ಸುಧನ್ವ ಶಾಸ್ತ್ರಿ ಮುಂತಾದವರು ಉಪಸ್ಥಿತರಿದ್ದರು.

    ಖಾರ್ವಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ:
    ಪಾರಂಪರಿಕವಾಗಿ ಶ್ರೀಮಠಕ್ಕೆ ನಡೆದುಕೊಳ್ಳುತ್ತಿರುವ ಖಾರ್ವಿ ಸಮಾಜ ಹಾಗೂ ಕೊಂಕಣ ಖಾರ್ವಿ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ನಡೆಯಿತು. ಗುರುಪೀಠ ಹಾಗೂ ಖಾರ್ವಿ ಹಾಗೂ ಕೊಂಕಣ ಖಾರ್ವಿ ಸಮಾಜದ ಮಧ್ಯೆ ಪಾರಂಪರಿಕವಾಗಿ ಗುರುಶಿಷ್ಯ ಬಂಧವಿದ್ದು, ಶ್ರೀಮಠಕ್ಕೆ ಖಾರ್ವಿ ಸಮಾಜದ ಕುರಿತಾಗಿ ಕಳಕಳಿ ಸದಾ ಇದೆ. ಸಮಾಜದ ಸುಖದುಃಖಗಳಿಗೆ ಶ್ರೀಮಠ ಸದಾ ಇರಲಿದೆ ಎಂದರು.

    Click here

    Click here

    Click here

    Call us

    Call us

    ಚಂದ್ರು ಖಾರ್ವಿ ಮರವಂತೆ, ವಾಸು ಖಾರ್ವಿ, ಸುರೇಶ್ ಖಾರ್ವಿ, ಚರಣ ಖಾರ್ವಿ, ಉಮಾಕಾಂತ ಖಾರ್ವಿ, ಗೋಪಾಲ ಖಾರ್ವಿ ಸೇರಿದಂತೆ ಸಮಾಜದವರು ಉಪಸ್ಥಿತರಿದ್ದರು.

    ಮಹಿಳೆಯರೇಕೆ ಮಾಡಬಾರದು?:
    ಮಹಿಳೆಯರು ಉಸಿರಾಟದ ವ್ಯಾಯಾಮಗಳನ್ನು ಮಾಡಬಹುದು. ಆದರೆ ಮೂಲಬಂಧ ಸಹಿತವಾದ ಪ್ರಾಣಾಯಾಮಗಳನ್ನು ಹಾಗೂ ಕೆಲವು ಯೋಗ ಪ್ರಕ್ರಿಯೆಗಳನ್ನು ಮಾಡಬಾರದು. ಯೋಗಶಾಸ್ತ್ರವು ಮಹಿಳೆಯರ ಕುರಿತಾಗಿ ಪಕ್ಷಪಾತವನ್ನು ಹೊಂದಿಲ್ಲ. ಆದರೆ ಕಾಳಜಿಯನ್ನು ಹೊಂದಿದೆ. ಕೆಲವು ಯೋಗ ಪ್ರಕ್ರಿಯೆಗಳಿಂದ ಮಹಿಳೆಯರ ದೇಹದ ಮೇಲೆ ವಿಪರೀತ ಪರಿಣಾಮಗಳು ಉಂಟಾಗುತ್ತವೆ. ಇದು ಮಹಿಳೆಯರ ಹೆಣ್ಣುತನಕ್ಕೆ ಸಂಚಕಾರವನ್ನು ತರಬಹುದು. ಹಾಗಾಗಿ ಎಚ್ಚರಿಕೆ ವಹಿಸಬೇಕು – ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ನೂತನ ಎನ್‌ಸಿಸಿ ಕೆಡೆಟ್‌ಗಳ ಪರಿಚಯ ಕಾರ್ಯಕ್ರಮ

    25/08/2026

    ವಿದ್ಯಾರ್ಥಿಗಳು ತಮ್ಮ ಕೌಶಲ್ಯ ಮತ್ತು ಜ್ಞಾನವನ್ನು ಹೆಚ್ಚಿಸಿಕೊಳ್ಳಿ: ಡಾ. ಶುಭಕರಾಚಾರಿ 

    25/08/2026

    ಜೆಸಿ​ ರಾಜು ಮೊಗವೀರ ಅವರಿಗೆ ಪ್ರತಿಷ್ಠಿತ ‘ಸಾಧನಾಶ್ರೀʼ ಪ್ರಶಸ್ತಿ ಪ್ರದಾನ

    25/08/2026
    Leave A Reply Cancel Reply

    five × three =

    Call us

    Click Here

    Call us

    Call us

    Call us
    Highest Viewed Recently
    • ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ನೂತನ ಎನ್‌ಸಿಸಿ ಕೆಡೆಟ್‌ಗಳ ಪರಿಚಯ ಕಾರ್ಯಕ್ರಮ
    • ಯೋಗಶಾಸ್ತ್ರದಲ್ಲಿ ಮಹಿಳೆಯರ ಬಗ್ಗೆ ಪಕ್ಷಪಾತವಿಲ್ಲ, ಕಾಳಜಿಯಷ್ಟೇ ಇದೆ: ಶ್ರೀ ರಾಘವೇಶ್ವರ
    • ವಿದ್ಯಾರ್ಥಿಗಳು ತಮ್ಮ ಕೌಶಲ್ಯ ಮತ್ತು ಜ್ಞಾನವನ್ನು ಹೆಚ್ಚಿಸಿಕೊಳ್ಳಿ: ಡಾ. ಶುಭಕರಾಚಾರಿ 
    • ಜೆಸಿ​ ರಾಜು ಮೊಗವೀರ ಅವರಿಗೆ ಪ್ರತಿಷ್ಠಿತ ‘ಸಾಧನಾಶ್ರೀʼ ಪ್ರಶಸ್ತಿ ಪ್ರದಾನ
    • ಎಸ್‌ಐಆರ್‌ ಪ್ರಕಟ – ಜಿಲ್ಲೆಯ 97,706 ಮಂದಿಗೆ ನೋಟೀಸು ಜಾರಿ: ಜಿಲ್ಲಾಧಿಕಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.