ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರ ಮಾರ್ಗದರ್ಶನದಂತೆ ನಡೆಯುತ್ತಿರುವ ’ಅಖಂಡ ಭಜನಾ ಸಪ್ತಾಹ’ ಮಹೋತ್ಸವ ಮಂಗಳವಾರ ಬೆಳಿಗ್ಗೆ ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿತು.
ಮಧ್ಯಾಹ್ನ ದೇವರಿಗೆ ವಿಶೇಷ ಪೂಜೆ, ಸಂತರ್ಪಣೆ, ಸಂಜೆ ಭಜನೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ದೇವಳದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಮತ್ತು ಪುರೋಹಿತರಾದ ಜಿ. ವಿಠಲದಾಸ ಭಟ್ ನೇತೃತ್ವದಲ್ಲಿ ಜರಗಿತು.
ಅಖಂಡ ಭಜನಾ ಸಪ್ತಾಹ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ನಗರ ಭಜನೆ, ರಾತ್ರಿ ವಿಶೇಷ ಪೂಜೆ, ಪ್ರಸಾದ ವಿತರಣೆ ನಡೆಯಲಿದೆ.
ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಆಡಳಿತ ಮಂಡಳಿ ಸದಸ್ಯ ಜಿ.ವೆಂಕಟೇಶ ನಾಯಕ್, ದೇವಳದ ಆಡಳಿತ ಮಂಡಳಿ ಸದಸ್ಯರು, ಜಿ.ಎಸ್.ಬಿ ಮಹಿಳಾ ಮಂಡಳಿ ಸದಸ್ಯರು, ಜಿಎಸ್‌ಬಿ ಸಮಾಜಬಾಂಧವರು, ಊರಿನ ಹತ್ತು ಸಮಸ್ತರು. ಮತ್ತಿತರರು ಉಪಸ್ಥಿತರಿದ್ದರು. ಅಖಂಡ ಭಜನಾ ಸಪ್ತಾಹ ಮಹೋತ್ಸವದಲ್ಲಿ ರಾಜ್ಯದ ವಿವಿಧೆಡೆಗಳಿಂದ ಸುಮಾರು 80ಕ್ಕೂ ಮಿಕ್ಕಿ ಭಜನಾ ತಂಡಗಳು ಭಜನಾ ಸೇವೆಯನ್ನು ಸಮರ್ಪಿಸಿದಿರು.
















