ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಹೈದರಾಬಾದ್ ಯಶೋದಾ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ, ಬೈಂದೂರು ಮೂಲದ ಡಾ. ಉದಯ ಕುಮಾರ್ ಹೊಸಾಡು ಅವರು ಅನಾರೋಗ್ಯದಿಂದ ಬುಧವಾರ ಮುಂಜಾನೆ ನಿಧನರಾಗಿದ್ದಾರೆ.
ಅವರು ಸಮರ್ಪಣಾ ಮನೋಭಾವ, ಸಹಾನುಭೂತಿ ಮತ್ತು ಹೃದ್ರೋಗ ಚಿಕಿತ್ಸಾ ಕ್ಷೇತ್ರದಲ್ಲಿನ ಅಮೂಲ್ಯ ಕೊಡುಗೆ ನೀಡಿದ್ದರು. ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯು ಶುಕ್ರವಾರದಂದು ಹೈದರಾಬಾದಿನಲ್ಲಿರುವ ಅವರ ನಿವಾಸದಲ್ಲಿ ನಡೆಯಲಿದೆ.











