ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ತೆಕ್ಕಟ್ಟೆ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಓಣಂ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಾಲಾ ಹಿರಿಯ ಶಿಕ್ಷಕಿ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಸಂಯೋಜಕಿ ವಿಲಾಸಿನಿ ಶೆಟ್ಟಿ ಉದ್ಘಾಟಿಸಿದರು. ಶಿಕ್ಷಕರು ಸಾಂಪ್ರದಾಯಿಕ ಉಡುಪಿನಲ್ಲಿ ಭಾಗವಹಿಸಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು.
ಕಾರ್ಯಕ್ರಮದ ಅಂಗವಾಗಿ ಸುಂದರವಾದ ಹೂವಿನ ರಂಗೋಲಿ ರಚಿಸಲಾಯಿತು. ವಿದ್ಯಾರ್ಥಿಗಳಿಗೆ ಓಣಂ ಹಬ್ಬದ ಮಹತ್ವ ಹಾಗೂ ಕೇರಳದ ಸಂಸ್ಕೃತಿ ಮತ್ತು ಪರಂಪರೆಯ ಕುರಿತು ಮಾಹಿತಿ ನೀಡುವುದರ ಜೊತೆಗೆ ವಿವಿಧ ಸಂಸ್ಕೃತಿಗಳ ಬಗ್ಗೆ ಗೌರವ ಮತ್ತು ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು ಸಂದೀಪ್ ಪುತ್ರನ್, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.
















