ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೈಕಿಗೆ ಹಿಂದಿನಿಂದ ಕಾರು ಢಿಕ್ಕಿಯಾಗಿ, ಬೈಕ್ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ರಾ.ಹೆ. 66ರ ತಾಲೂಕಿನ ಹೆಮ್ಮಾಡಿ ಸಮೀಪದ ಕನ್ನಡಕುದ್ರು ಕ್ರಾಸ್ ಬಳಿ ಸಂಭವಿಸಿದೆ.
ಹೆಮ್ಮಾಡಿ ಸಂತೋಷನಗರ ನಿವಾಸಿ ನರಸಿಂಹ ಆಚಾರ್ (60) ಸಾವನ್ನಪ್ಪಿದವರು.
ಅವರು ತ್ರಾಸಿ ಕಡೆಯಿಂದ ಕುಂದಾಪುರ ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಹಾಗೂ ಅಜಾಗರೂಕತೆಯಿಂದ ದೀಪಕ್ ಕುಮಾರ್ ಕಾರು ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿರುವುದಾಗಿದೆ. ಪರಿಣಾಮ ಬೈಕ್ ಸಹಿತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ನರಸಿಂಹ ಆಚಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರೊಳಗೆ ಸಾವನ್ನಪ್ಪಿರುವುದಾಗಿದೆ.
ಸಂಚಾರ ಠಾಣಾ ಪಿಎಸ್ ಐ ಅನೂಪ್ ನಾಯಕ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















