ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಮ್ಮ ಪುರಾತನ ಪರಂಪರೆ, ಸಂಸ್ಕೃತಿಯನ್ನು ನಾವುಗಳು ಸರಿಯಾಗಿ ಅರಿತುಕೊಂಡು ನಮ್ಮ ಬದುಕನ್ನು ರೂಪಿಸಿಕೊಳ್ಳುವ ಮಹತ್ತರ ಜವಾಬ್ದಾರಿ ನಮ್ಮದೆಂದು ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಟಿ. ಸೋನ್ಸ್ ಹೇಳಿದರು.
ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ “ಸಾಂಪ್ರದಾಯಿಕ ದಿನಾಚರಣೆ” ಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾಗಿರುವ ಕೆ. ಶಾಂತಾರಾಮ್ ಪ್ರಭು ಕಾರ್ಯಕ್ರಮದ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು.
ಮುಖ್ಯ ಅತಿಥಿ ರೂಪ ಶೆಣೈ ಪ್ರಾಂಶುಪಾಲರು, ಗುರುಕುಲ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, “ಮಣ್ಣಿನ ಅಸ್ಮಿತೆಗೆ ನಮ್ಮ ಪರಂಪರೆ ಸಂಪ್ರದಾಯ ದರ್ಪಣವಿದ್ದಂತೆ ಪರಂಪರೆ, ಸಂಸ್ಕೃತಿ, ಸಂಪ್ರದಾಯ ಈ ಮಣ್ಣಿನ ಬೇರು ಮಾನವನ ಪರಿಪೂರ್ಣ ಬದುಕಿನಲ್ಲಿ ವಿದ್ಯೆ ಬುದ್ಧಿ ಜ್ಞಾನ ಸಂಪ್ರದಾಯ ಆಚರಣೆ ಪರಂಪರೆ ಸಂಸ್ಕೃತಿ ಬಹಳ ಮುಖ್ಯ” ಎಂದು ನುಡಿದರು.
ಗೌರವ ಅತಿಥಿ ಶೋಭಾ ಶೆಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗಳು , ಕುಂದಾಪುರ ಇವರು ಸಭೆಯನ್ನು ಉದ್ದೇಶಿಸಿ ಮಾತನಾಡಿ “ಈ ನಾಡಿನ ಪರಂಪರೆ ಈ ಮಣ್ಣಿನ ಅಸ್ಮಿತೆಯನ್ನು ಪ್ರತಿಬಿಂಬಿಸುತ್ತದೆ” ಎಂದು ನುಡಿದರು.
ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರ ಆಚಾರಿ ಸಂಪ್ರದಾಯ ಪರಂಪರೆಗಳ ಮೌಲ್ಯವನ್ನು ಎತ್ತಿ ಹಿಡಿಯುವ ಮಾತುಗಳನ್ನಾಡಿದರು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜಾ ಎಂ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ 63 ವಿದ್ಯಾರ್ಥಿಗಳನ್ನು ಗುರುತಿಸಿ ಗೌರವ ಪುರಸ್ಕಾರ ನೀಡಲಾಯಿತು. ಸಾಂಪ್ರದಾಯಿಕ ಆಹಾರ ತಯಾರಿಕಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಚೈತ್ರ ಸಂಖ್ಯಾಶಾಸ್ತ್ರ ಉಪನ್ಯಾಸಕಿ ಸ್ವಾಗತಿಸಿದರು. ಭೌತಶಾಸ್ತ್ರ ಉಪನ್ಯಾಸಕಿ ಅಕ್ಷತಾ ವಂದಿಸಿದರು. ರೇಣುಕಾ ಕಾರ್ಯಕ್ರಮ ನಿರೂಪಿಸಿದರು.
















