ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ, ಆಗಸ್ಟ್ 28: ರಕ್ಷಾ ಬಂಧನದ ಪ್ರಯುಕ್ತ ಬಿಜೆಪಿ ಕುಂದಾಪುರ ಮಹಿಳಾ ಮೋರ್ಚಾ ವತಿಯಿಂದ ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರಿಗೆ ರಾಖಿ ಕಟ್ಟಿ ಶುಭ ಕೋರಲಾಯಿತು.
ಮಹಿಳಾ ಮೋರ್ಚಾ ಪದಾಧಿಕಾರಿಗಳು ಶಾಸಕರ ಕಚೇರಿಯಲ್ಲಿ ಶಾಸಕರಿಗೆ ರಾಖಿ ಕಟ್ಟಿ, ಅವರ ದೀರ್ಘಾಯುಷ್ಯ ಮತ್ತು ಜನಸೇವೆಗೆ ಶಕ್ತಿ ನೀಡಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು “ರಕ್ಷಾ ಬಂಧನವು ಸಹೋದರ-ಸಹೋದರಿಯರ ಪವಿತ್ರ ಬಂಧದ ಸಂಕೇತ. ಸಹೋದರಿಯರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ” ಎಂದು ಹೇಳಿ ಮಹಿಳಾ ಮೋರ್ಚಾ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಸೌರಭಿ ಪೈ,, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಶ್ವೇತಾ ಶ್ರೀನಿಧಿ ಉಪಾಧ್ಯಾಯ, ವಿದ್ಯಾ ಸಾಲಿಯನ್,, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಮಂಡಲ ಕಾರ್ಯದರ್ಶಿ ನೇತ್ರಾವತಿ ಮಡಿವಾಳ,, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಲತಾ ಸುರೇಶ್ ಶೆಟ್ಟಿ ಗೋಪಾಡಿ ಹಾಗೂ ಪ್ರಮುಖರು, ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.
















