ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ವತಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ BLA-2 ಕಾರ್ಯಕರ್ತರಿಗೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕುರಿತು ಕಾರ್ಯಾಗಾರ ಮತ್ತು ಅಭಿನಂದನಾ ಸಮಾರಂಭವು ಕೋಟೇಶ್ವರ ಶಾರದಾ ಕಲ್ಯಾಣ ಮಂಟಪದಲ್ಲಿ ಜರುಗಿತು.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ, “ಪ್ರಜಾಪ್ರಭುತ್ವದ ಆಧಾರವೇ ಮತದಾರರ ಪಟ್ಟಿ. ಒಬ್ಬ ಅರ್ಹ ಮತದಾರನೂ ಹೊರಗುಳಿಯಬಾರದು. BLA-2 ಕಾರ್ಯಕರ್ತರು ಕೊನೆಯ ಹಂತ ಬಾಕಿ ಇರುವುದರಿಂದ ಮನೆ ಮನೆಗೆ ಭೇಟಿ ನೀಡಿ ಖಚಿತ ಮಾಹಿತಿ ಸಂಗ್ರಹಿಸಬೇಕು” ಎಂದರು.
ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅಧ್ಯಕ್ಷತೆ ವಹಿಸಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ BLA -2 ಹಾಗೂ ಘಟನಾಯಕ್ ರ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಾಸ್ತಾವಿಕ ಮಾತನಾಡಿದರು.
ಸಮಗ್ರ ಮತಪಟ್ಟಿ ಪರಿಷ್ಕರಣೆಯ ಕಾರ್ಯಗಾರ ಬಗ್ಗೆ ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ, (ಹೊಸ ಸೇರ್ಪಡೆ, ಹೆಸರು ತೆಗೆಯುವಿಕೆ, ತಿದ್ದುಪಡಿ ಭರ್ತಿ, ಬಗ್ಗೆ ಕಾರ್ಯಕರ್ತರಿಗೆ ತರಬೇತಿ ನೀಡಿದರು.ಇದೇ ಸಂದರ್ಭದಲ್ಲಿ ನೂತನ BLA-2 ಪ್ರತಿನಿಧಿಗಳು ಮತ್ತು ಘಟನಾಯಕ್ ರನ್ನು ಅಭಿನಂದಿಸಿದರು.
ವೇದಿಕೆಯಲ್ಲಿ SIR ಪ್ರಭಾರಿ ಶ್ಯಾಮಲ ಕುಂದರ್,, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್,, ಉಪಸ್ಥಿತರಿದ್ದರು. ಕುಂದಾಪುರ BLA -1 ರಾಜೇಶ್ ಶೆಟ್ಟಿ, ಸರ್ವರನ್ನು ಸ್ವಾಗತಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.
ಈ ಸಂದರ್ಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ BLA -2 ಕಾರ್ಯಕರ್ತರು, ಘಟನಾಯಕರು, ಮಂಡಲದ ಪದಾಧಿಕಾರಿಗಳು, ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
















