ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗದ ಆಶ್ರಯದಲ್ಲಿ ‘ಓಣಂ’ನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ದೀಪ ಬೆಳಗಿಸಿ ಶುಭ ಹಾರೈಸಿದರು.
ಈಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ರೇವತಿ ಡಿ., ಸಹಾಯಕ ಪ್ರಾಧ್ಯಾಪಕಿ ಸರೋಜ ಉಪಸ್ಥಿತರಿದ್ದು, ಬೋಧಕ-ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.











