ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ ಇವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಣಯಕುಮಾರ್ ಶೆಟ್ಟಿ, ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ಸಂಸ್ಥೆಯ ಉಪಾಧ್ಯಕ್ಷರಾದ ಸುಜಾತ ಕಾಂತು ಬಾಬು ಕಾರ್ವಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಸ್ಥಾಪಕ ಸದಸ್ಯ ಗೋಪಾಲ ಚಂದನ್ ಮತ್ತು ಪ್ರಧಾನ ಕಾರ್ಯದರ್ಶಿ ಹರ್ಷೇಂದ್ರ ಆಚಾರ್ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಖ್ಯಾತ ಪ್ರಾಚೀನ ವಸ್ತು ಸಂಗ್ರಹಕಾರ ಜಿ. ಭಾಸ್ಕರ್‌ಕಲೈಕಾರ್, ಗಣೇಶ್ ಮಡಿವಾಳ್ ಮೊದಲಾದವರು ಮತ್ತು ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು. ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
















