ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಸಹೋದರತ್ವ ಮತ್ತು ರಕ್ಷಣೆಯ ಸಂಕೇತವಾದ ರಕ್ಷಾ ಬಂಧನ ಹಬ್ಬದ ಅಂಗವಾಗಿ ಬಿಜೆಪಿ ಕುಂದಾಪುರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ರಾಖಿ ಕಟ್ಟಿ ಸಂಭ್ರಮಿಸಲಾಯಿತು.
ಕಾರಂತ ಥೀಂ ಪಾರ್ಕ್‌ನಲ್ಲಿದ್ದ ಸಂಸದರನ್ನು ಭೇಟಿ ಮಾಡಿದ ಮಹಿಳಾ ಮೋರ್ಚಾ ಪದಾಧಿಕಾರಿಗಳು ಸಂಸದರಿಗೆ ರಾಖಿ ಕಟ್ಟಿ, ಸಿಹಿ ತಿನ್ನಿಸಿ ಶುಭ ಕೋರಿದರು. ಸಹೋದರಿಯರ ರಕ್ಷಣೆ ಮತ್ತು ಸಮಾಜದಲ್ಲಿ ಮಹಿಳೆಯರ ಸುರಕ್ಷತೆಗಾಗಿ ತಮ್ಮ ಜನಸೇವೆ ನಿರಂತರವಾಗಿರಲಿ, ಆಯುಷ್ಯ, ಆರೋಗ್ಯ, ಶಕ್ತಿ ಭಗವಂತ ಕರುಣಿಸಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮಹಿಳಾ ಮೋರ್ಚಾ ಪದಾಧಿಕಾರಿಗಳಿಗೆ ರಕ್ಷಾ ಬಂಧನದ ಶುಭಾಶಯ ಕೋರಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ, ಪ್ರಧಾನ ಕಾರ್ಯದರ್ಶಿಗಳಾದ ಶ್ವೇತಾ ಶ್ರೀನಿಧಿ ಉಪಾಧ್ಯಾಯ, ವಿದ್ಯಾ ಸಾಲಿಯಾನ್, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ನಿರ್ಮಲ ಶೆಟ್ಟಿ, ಮಂಡಲ ಉಪಾಧ್ಯಕ್ಷೆ ರೂಪಾ ಬಾಬು ಪೈ, ಮಂಡಲ ಕಾರ್ಯದರ್ಶಿ ನೇತ್ರಾವತಿ ಮಡಿವಾಳ,ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸುಲತಾ ಹೆಗ್ಡೆ ಸೇರಿದಂತೆ ಮಹಿಳಾ ಮೋರ್ಚಾ ಪ್ರಮುಖರು ಉಪಸ್ಥಿತರಿದ್ದರು.
















