ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಯೋಜಕರಾಗಿ ಹೆಚ್. ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿಯವರನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ ಶ್ರೀ ಬಿ.ಕೆ . ಹರಿಪ್ರಸಾದ್ ಆದೇಶಿಸಿದ್ದಾರೆ. ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಜವಾಬ್ದಾರಿ ನೀಡಲಾಗಿದೆ .
ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿ ಅವರು ಈ ಹಿಂದೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಎನ್.ಎಸ್.ಯು.ಐ ಅಧ್ಯಕ್ಷರಾಗಿ, ಮಂಗಳೂರು ವಿ.ವಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಉಪಾದ್ಯಕ್ಷರಾಗಿ, ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷರಾಗಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಮತ್ತು ಟಿಎಪಿಸಿಎಂಎಸ್ ಲಿ . ಅಧ್ಯಕ್ಷರಾಗಿದ್ದಾರೆ .











