ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶ ಹಾಗೂ ವಾಣಿಜ್ಯ ವಿಭಾಗದ ವತಿಯಿಂದ “ಎಐ ಯುಗದ ವೃತ್ತಿ ಅವಕಾಶಗಳು” ಕುರಿತು ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸುಲ್ತಾನೆ ಆಫ್ ಒಮಾನ್ ಮಸ್ಕತ್ ನ ಕಾಲೇಜ್ ಆಫ್ ಬ್ಯಾಂಕಿಂಗ್ ಮತ್ತು ಫೈನಾನ್ಸ್ ಅಧ್ಯಯನ ಸ್ನಾತಕೋತ್ತರ ಸಂಶೋಧನಾ ಕೇಂದ್ರದ ಇನೋವೇಶನ್ ವಿಭಾಗದ ನಿರ್ದೇಶಕರಾದ ಡಾ. ಆನಂದ್ ಎಸ್. ಮಾತನಾಡಿ, ಇಂದಿನ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ನಡುವೆ ವಾಣಿಜ್ಯ ವಿದ್ಯಾರ್ಥಿಗಳಿಗೆ ಇರುವ ಅವಕಾಶಗಳು ಮತ್ತು ಭವಿಷ್ಯದ ಉದ್ಯೋಗ ಕ್ಷೇತ್ರಕ್ಕೆ ಅಗತ್ಯವಾದ ಕೌಶಲ್ಯಗಳ ಕುರಿತು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ್, ವಾಣಿಜ್ಯ ವಿಭಾಗದ ವೊಕೇಶನಲ್ ಟ್ಯಾಕ್ಸ್ ಪ್ರೊಸೀಜರ್ ವಿಭಾಗದ ಮುಖ್ಯಸ್ಥರಾದ ರಿತಿನ್, ಹಾಗೂ ವಾಣಿಜ್ಯ ವಿಭಾಗದ ಸಂಯೋಜಕರಾದ ಮಮತಾ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಡಾ. ಆನಂದ್ ಎಸ್. ಅವರು ಎಐ ಯುಗದಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗೆ ಲಭ್ಯವಿರುವ ವೃತ್ತಿ ಅವಕಾಶಗಳು ಹಾಗೂ ಅಗತ್ಯ ಕೌಶಲ್ಯಗಳ ಕುರಿತು ಮಾರ್ಗದರ್ಶನ ನೀಡಿದರು. ಹನಿ ಮತ್ತು ತಂಡ ಪ್ರಾರ್ಥಸಿದರು ಹಾಗೂ ಗೌತಮಿ ಸಂಪನ್ಮೂಲ ವ್ಯಕ್ತಿಗಳ ಪರಿಚಯ ನೀಡಿದರು. ಧ್ರುವ್ ಕಾರ್ಯಕ್ರಮ ನಿರೂಪಿಸಿದರು.
















