ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಾರ್ಷಿಕವಾಗಿ ಶ್ರೀ ಮಹಾಕಾಳಿ ದೇವಸ್ಥಾನದ ಕೊಂಕಣಿ ಖಾರ್ವಿ ಸಮಾಜದ ವತಿಯಿಂದ ಪ್ರಕೃತಿಕ ವಿಕೋಪಗಳಿಂದ ಯಾವುದೇ ಅಪಘಾತಗಳು ಜರಗದಂತೆ ವರ್ಷಾಂಪ್ರತಿ ಜರುಗುವ ಸಮುದ್ರ ಪೂಜೆ ಕೋಡಿಯ ಸಮುದ್ರ ತೀರದಲ್ಲಿ ವಿಜೃಂಭಣೆಯಿಂದ ನೆರವೇರಿತು.

ದೇವಸ್ಥಾನದ ಅಧ್ಯಕ್ಷರಾದ ಪ್ರಕಾಶ್ ಆರ್. ಖಾರ್ವಿ ಅವರ ಅಧ್ಯಕ್ಷತೆಯಲ್ಲಿ ಮೊಕ್ತೇಸರರಾದ , ಪಾಂಡು ಸಾರಂಗ ಆನಂದ ನಾಯ್ಕ್ ಹಾಗೂ ದೇವಸ್ಥಾನದ ಮುಖ್ಯ ಅರ್ಚಕರಾದ ಶಿವರಾಮ್ ಭಟ್ ನೇತೃತ್ವದಲ್ಲಿ ಪೂಜೆಯ ವಿಧಿವಿಧಾನಗಳನ್ನು ಸಾಂಗವಾಗಿ ನೆರವೇರಿಸಿದರು.
ಕಾರ್ಯಕ್ರಮದ ಉಸ್ತುವಾರಿಯನ್ನು ದೇವಸ್ಥಾನದ ಸಮಿತಿಯ ಸದಸ್ಯ ಸುನಿಲ್ ಖಾರ್ವಿ ತಲ್ಲೂರು ವಹಿಸಿದ್ದರು.
ಉಪಾಧ್ಯಕ್ಷರಾದ ನಾರಾಯಣ ಖಾರ್ವಿ ಮದ್ದುಗುಡ್ಡೆ, ಕಾರ್ಯದರ್ಶಿ ನಾಮದೇವ ಖಾರ್ವಿ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು, ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ನಾಗರಾಜ್ ಖಾರ್ವಿ ವಿದ್ಯಾರಂಗ ಮಿತ್ರ ಮಂಡಳಿಯ ಅಧ್ಯಕ್ಷರಾದ ಜಯಾನಂದ ಖಾರ್ವಿ , ನವರಾತ್ರಿ ಸಮಿತಿಯ ಮಂಜುಳಾ ಪಿ . ಖಾರ್ವಿ, ಮಹಾಕಾಳಿ ಮಹಿಳಾ ಮಂಡಳಿಯ ಅಧ್ಯಕ್ಷೆ ಲಕ್ಷ್ಮಿ ಖಾರ್ವಿ ವಿದ್ಯಾನಿಧಿ ಅಧ್ಯಕ್ಷ ದಿನಕರ ಖಾರ್ವಿ ಹಾಗೂ ಸಂಘ ಸಂಸ್ಥೆಯ ಸದಸ್ಯರು ಸೇರಿದಂತೆ ಹಲವರು ಸಮಾಜ ಬಾಂಧವರು ಸಮಾರಂಭದಲ್ಲಿ ಭಾಗವಹಿಸಿದ್ದರು.
















