Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಗ್ನಿಶಾಮಕ ಕ್ಷೇತ್ರದಲ್ಲಿ ವಿಪುಲ ಉದ್ಯೋಗಾವಕಾಶ: ಶಂಕರ್‌ ಎಂ.
    alvas nudisiri

    ಅಗ್ನಿಶಾಮಕ ಕ್ಷೇತ್ರದಲ್ಲಿ ವಿಪುಲ ಉದ್ಯೋಗಾವಕಾಶ: ಶಂಕರ್‌ ಎಂ.

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಕ್ಷೇತ್ರದಲ್ಲಿ ಯುವಜನರಿಗೆ, ಅದರಲ್ಲೂ ವಿಜ್ಞಾನ ಪದವೀಧರರಿಗೆ, ಉತ್ತಮ ಉದ್ಯೋಗಾವಕಾಶಗಳಿದ್ದು, ಸ್ಥಳೀಯ ಯುವಕರು ಈ ಕ್ಷೇತ್ರವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂದು ಮಂಗಳೂರು ವಲಯದ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಹಾಗೂ ಮಂಗಳೂರು ವಲಯದ ಮುಖ್ಯ ಅಗ್ನಿಶಾಮಕ ಅಧಿಕಾರಿ (ಪ್ರಭಾರ) ಶಂಕರ್ ಎಂ. ಹೇಳಿದರು.

    Click Here

    Call us

    Click Here

    ಅವರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ  ವಿಜ್ಞಾನ ವಿಭಾಗದ ವತಿಯಿಂದ ಶನಿವಾರ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ಅಗ್ನಿ ಸುರಕ್ಷತಾ ವ್ಯವಸ್ಥೆ ಹಾಗೂ ಅಗ್ನಿಶಾಮಕ ಇಲಾಖೆಯ ಕಾರ್ಯವೈಖರಿ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಗ್ನಿಶಾಮಕ ಇಲಾಖೆಯ ಇತಿಹಾಸ, ಇಲಾಖೆಯ ಶ್ರೇಣೀಕೃತ ವ್ಯವಸ್ಥೆ, ವಿವಿಧ ಹಂತಗಳಲ್ಲಿನ ಅಧಿಕಾರಿಗಳ ಜವಾಬ್ದಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಕರ್ತವ್ಯಗಳ ಕುರಿತು ಮಾಹಿತಿ ನೀಡಿದರು. ಅಗ್ನಿ ಅವಘಡಗಳನ್ನು ನಿಯಂತ್ರಿಸುವುದಷ್ಟೇ ಅಲ್ಲದೆ, ವಿವಿಧ ತುರ್ತು ಪರಿಸ್ಥಿತಿಗಳಲ್ಲಿ ಜನರ ಪ್ರಾಣ ಹಾಗೂ ಆಸ್ತಿಪಾಸ್ತಿಯನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ಇಲಾಖೆಯ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

    ಅಗ್ನಿಶಾಮಕ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಸಾಕಷ್ಟಿದ್ದರೂ ಸ್ಥಳೀಯ ಯುವಕರ ಪಾಲ್ಗೊಳ್ಳುವಿಕೆ ಕಡಿಮೆ ಇದೆ. ಬಿಎಸ್ಸಿ ರಸಾಯನಶಾಸ್ತ್ರ ವಿಜ್ಞಾನ ಪದವಿ ಪಡೆದವರಿಗೆ ಈ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳಿವೆ. ಉತ್ತಮ ವೇತನ ಹಾಗೂ ವೃತ್ತಿ ಬೆಳವಣಿಗೆಗೆ ಅವಕಾಶವಿರುವುದರಿಂದ ಯುವಕರು ಈ ಕ್ಷೇತ್ರದತ್ತ ಹೆಚ್ಚಿನ ಆಸಕ್ತಿ ತೋರಬೇಕು ಎಂದು ಅವರು ಹೇಳಿದರು.

    ಸ್ಥಳೀಯರು ಅಗ್ನಿಶಾಮಕ ಸೇವಾ ಕ್ಷೇತ್ರಕ್ಕೆ ಪ್ರವೇಶಿಸಿದರೆ, ತಮ್ಮ ಪ್ರದೇಶದ ಭೌಗೋಳಿಕ ಪರಿಸ್ಥಿತಿ, ಜನಜೀವನ ಹಾಗೂ ಸ್ಥಳೀಯ ಸಮಸ್ಯೆಗಳ ಅರಿವು ಇರುವುದರಿಂದ ತುರ್ತು ಸಂದರ್ಭಗಳಲ್ಲಿ ಪರಿಣಾಮಕಾರಿಯಾಗಿ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ. ಸ್ಥಳೀಯವಾಗಿ ಉದ್ಯೋಗ ಪಡೆದು, ಸ್ಥಳೀಯರ ಸೇವೆ ಮಾಡುವ ಅವಕಾಶವನ್ನು ಯುವಕರು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಕಾರ್ಯಕ್ರಮದ ಅಂಗವಾಗಿ ಅಗ್ನಿಶಾಮಕ ಸುರಕ್ಷತಾ ಸಾಧನಗಳ ಬಳಕೆ, ಬೆಂಕಿ ನಂದಿಸುವ ವಿಧಾನಗಳು ಹಾಗೂ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದವತಿಯಿಂದ ಶಂಕರ್ ಎಂ.ರವರನ್ನು ಗೌರವಿಸಲಾಯಿತು.

    Click here

    Click here

    Click here

    Call us

    Call us

    ಮೂಡುಬಿದಿರೆಯ ಅಗ್ನಿಶಾಮಕ ಸಿಬ್ಬಂದಿಗಳು ಪ್ರಾಯೋಗಿಕ ಪ್ರತ್ಯಾಕ್ಷಿಕೆಯಲ್ಲಿ ಭಾಗವಹಿಸಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ವಿಜ್ಞಾನ ವಿಭಾಗದ ಮುಖ್ಯಸ್ಥೆ ರಮ್ಯ ರೈ ಇದ್ದರು. ವೃಂದಾ ಕರ‍್ಯಕ್ರಮ ನಿರೂಪಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ

    29/08/2026

    ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಪ.ಪೂ ಕಾಲೇಜಿಗೆ 2 ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ

    29/08/2026

    ಭಂಡಾರ್ಕಾರ್ಸ್ ಕಾಲೇಜು: ಎಐ ಯುಗದ ವೃತ್ತಿ ಅವಕಾಶಗಳ ಕುರಿತು ಸಂವಾದ ಕಾರ್ಯಕ್ರಮ

    29/08/2026
    Leave A Reply Cancel Reply

    twelve − 11 =

    Call us

    Click Here

    Call us

    Call us

    Call us
    Highest Viewed Recently
    • ಅಗ್ನಿಶಾಮಕ ಕ್ಷೇತ್ರದಲ್ಲಿ ವಿಪುಲ ಉದ್ಯೋಗಾವಕಾಶ: ಶಂಕರ್‌ ಎಂ.
    • ಕುಂದಾಪುರ ಪಶು ವೈದ್ಯಕೀಯ ಶಿಬಿರ ಕಚೇರಿಯಲ್ಲಿ ಡಾ. ಪೂಜಿತಾ ಅವರಿಗೆ ಬೀಳ್ಕೊಡುಗೆ ಸಮಾರಂಭ
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಆಶ್ರಯದಲ್ಲಿ ರಕ್ಷಾ ಬಂಧನ
    • ಬೀಜಾಡಿ ಅಶಕ್ತ ಕುಟುಂಬದ ಬ್ಯಾಂಕ್ ಸಾಲ ಕಟ್ಟಿ ಮಾನವೀಯತೆ ಮೆರೆದ ಶ್ರೀ ಕೃಷ್ಣಪ್ರಸಾದ್ ಫೌಂಡೇಶನ್
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.