Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಸೆಪ್ಟಂಬರ್ ಮಾಹೆಯಿಂದ ಪ್ರಜಾಸೇವೆ ಆಂದೋಲನ ಸಭೆ ಆಯೋಜನೆ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಸೆಪ್ಟಂಬರ್ ಮಾಹೆಯಿಂದ ಪ್ರಜಾಸೇವೆ ಆಂದೋಲನ ಸಭೆ ಆಯೋಜನೆ: ಜಿಲ್ಲಾಧಿಕಾರಿ

    Updated:01/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯ ಜನಸಾಮಾನ್ಯರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಒದಗಿಸುವ ಉದ್ದೇಶದಿಂದ ಸೆ.5 ರಿಂದ ಪ್ರತೀ ಶನಿವಾರ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆ ಆಯೋಜಿಸಲಾಗುತ್ತಿದ್ದು, ಸಭೆಗಳನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು.

    Click Here

    Call us

    Click Here

    ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸುವ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಆಯೊಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಪ್ರಜಾಸೇವಾ ಇಲಾಖೆಯ ವತಿಯಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲು ರಾಜ್ಯ ಸರ್ಕಾರವು ನಿರ್ಧರಿಸಿದ್ದು, ಸೆಪ್ಟಂಬರ್ 5 ರಿಂದ 1 ನೇ ಮತ್ತು 3ನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲ್ಲೂಕು ಮಟ್ಟದ ಸಭೆಗಳು ಜರುಗಲಿವೆ. 2 ನೇ ಮತ್ತು 4 ನೇ ಶನಿವಾರದಂದು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಮತ್ತು ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಸಭೆಗಳನ್ನು ಆಯೋಜಿಸಲಾಗುವುದು ಎಂದರು.

    ಸರ್ಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಅರ್ಹ ಜನರಿಗೆ ತಲುಪುವಂತೆ ಮಾಡುವುದರ ಜೊತೆಗೆ ಕಚೇರಿಗಳಿಗೆ ತಮ್ಮ ಕೆಲಸಕ್ಕಾಗಿ ಪದೇ ಪದೇ ಅಲೆಯುವುದನ್ನು ತಪ್ಪಿಸಲು ಈ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಪ್ರಜಾಸೇವೆ ಆಂದೋಲನಾ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅಧಿಕಾರಿಗಳು ಮುತುವರ್ಜಿಯಿಂದ ಕೆಲಸ ಮಾಡಬೇಕೆಂದರು.

    ಸಭೆ ನಡೆಯುವ ದಿನಾಂಕಕ್ಕೂ 15 ದಿನಗಳ ಮುಂಚಿತವಾಗಿ ಸಂಬAಧಪಟ್ಟ ಕ್ಷೇತ್ರ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ ಅಹವಾಲುಗಳಿಗೆ ಸಂಬಂಧಿಸಿದ ಪೂರ್ವ ಮುದ್ರಿತ ಅರ್ಜಿ ನಮೂನೆಗಳನ್ನು ತಲುಪಿಸಬೇಕು. ಸಭೆ ನಡೆಯುವ ಸ್ಥಳಗಳಲ್ಲಿ ಗಣಕಯಂತ್ರ, ಇಂಟರ್‌ನೆಟ್, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದರೊಂದಿಗೆ ಇಲಾಖಾವಾರು ಕೌಂಟರ್‌ಗಳನ್ನು ಸ್ಥಾಪಿಸಬೇಕು. ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆಯಲ್ಲಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದ ಅವರು, ಸಭೆ ನಡೆಯುವ ದಿನ ಸಂಬAಧಪಟ್ಟ ಇಲಾಖೆಗಳು ಬೇರೆ ಯಾವುದೇ ಸಭೆಗಳನ್ನು ನಿಗದಿಪಡಿಸುವಂತಿಲ್ಲ ಎಂದರು.

    ಸದರಿ ಸಭೆಗಳಲ್ಲಿ ಜಿಲ್ಲೆಯ ಪ್ರಮುಖ ಇಲಾಖೆಗಳು ವಸ್ತು ಪ್ರದರ್ಶನದ ಮಳಿಗೆಗಳನ್ನು ಸ್ಥಾಪಿಸಿ, ಇಲಾಖೆಯಿಂದ ದೊರೆಯುವ ಸೇವೆ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು. ಫಲಾನುಭವಿಗಳಿಗೆ ಯಾವುದೇ ಸೌಲಭ್ಯ ವಿತರಣೆ ಇದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ತಾಲೂಕು ಮಟ್ಟದ ಸಭೆಗಳಲ್ಲಿ ವಿತರಿಸಲು ಅಗತ್ಯ ತಯಾರಿ ಮಾಡಿಟ್ಟುಕೊಳ್ಳಬೇಕು ಎಂದರು.

    Click here

    Click here

    Click here

    Call us

    Call us

    ಪ್ರಜಾಸೇವೆ ಆಂದೋಲನ ಸಭೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದರೊಂದಿಗೆ ಅವರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು. 

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಕೆ. ಕಸ್ತೂರಿ ರಂಗನ್ ವರದಿಯಲ್ಲಿರುವ ಸಾಧಕ – ಭಾದಕಗಳ ಪರಿಶೀಲನೆಗೆ ಕ್ರಮ: ಜಿಲ್ಲಾಧಿಕಾರಿ

    01/09/2026

    ಜಗತ್ತಿಗೆ ಸಮಾನತೆ ಎಂಬ ಜ್ಞಾನದ ಬೆಳಕನ್ನು ಚೆಲ್ಲಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು: ಶಾಸಕ ಯಶ್‌ಪಾಲ್‌ ಸುವರ್ಣ

    29/08/2026

    ಕುಂದಾಪುರ: ಸಾಲ – ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    28/08/2026
    Leave A Reply Cancel Reply

    six + 11 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಕೆ. ಕಸ್ತೂರಿ ರಂಗನ್ ವರದಿಯಲ್ಲಿರುವ ಸಾಧಕ – ಭಾದಕಗಳ ಪರಿಶೀಲನೆಗೆ ಕ್ರಮ: ಜಿಲ್ಲಾಧಿಕಾರಿ
    • ರೋಟರಿ ಕ್ಲಬ್ ತೆಕ್ಕಟ್ಟೆಗೆ ಪ್ರತಿಷ್ಠಿತ ಎಕ್ಸಲೆನ್ಸ್ ಕ್ಲಬ್ ಪ್ರಶಸ್ತಿ
    • ಅದ್ದೂರಿಯಾಗಿ ನಡೆದ ‘ಟೀಮ್ ಕುಂದಾಪುರಿಯನ್ಸ್’ ಆಯೋಜನೆಯ ಕುಂದಾಪ್ರ ಕನ್ನಡ ಉತ್ಸವ
    • ಕ್ಲೀನ್ ಕಿನಾರ ತಂಡಕ್ಕೆ ಸ್ವಚ್ಛತಾ ಪರಿಕರಗಳ ಹಸ್ತಾಂತರ
    • ಹೆಮ್ಮಾಡಿ ಜನತಾ ಪಿಯು ಕಾಲೇಜಿನಲ್ಲಿ ಜನತಾ ದಿಬ್ಬಣ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.