ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಬಾಲಕ – ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪಿಯು ಕಾಲೇಜಿನ ಬಾಲಕ – ಬಾಲಕಿಯರ ಉಭಯ ತಂಡಗಳು ದಿಗ್ವಿಜಯ ಸಾಧಿಸಿ ಚಾಂಪಿಯನ್ ಪಟ್ಟವನ್ನು ಮೂಡಿಗೇರಿಕೊಂಡು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದಿದ್ದಾರೆ.
ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣ ಉಪಸ್ಥಿತರಿದ್ದಾರೆ.
ಕ್ರೀಡಾಪಟುಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಶ್ಲಾಘಿಸಿ, ಮುಂದಿನ ಪಂದ್ಯಗಳಿಗೆ ಶುಭ ಹಾರೈಸಿದ್ದಾರೆ.











