ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು, ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಡಿ, ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಹಾಗೂ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಮದ್ದೋಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಶಾಲೆಯಲ್ಲಿ ಸುಮಾರು ₹6 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ಬಾಲಕಿಯರ ಶೌಚಾಲಯದ ಕಾಮಗಾರಿಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೂಮಿಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಶೈಕ್ಷಣಿಕ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಕಂಪ್ಯೂಟರ್ ಲ್ಯಾಬ್ ಅನ್ನು ಉದ್ಘಾಟಿಸಿದರು.
ಶಾಲಾ ಮಕ್ಕಳಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಈ ಯೋಜನೆಗಳು ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣ ಮತ್ತು ಆರೋಗ್ಯಕರ ವಾತಾವರಣ ನಿರ್ಮಾಣಕ್ಕೆ ಸಹಕಾರಿಯಾಗಲಿವೆ.











