ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು, ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಡಿ, ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಹಾಗೂ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಬೈಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ₹6 ಲಕ್ಷ ವೆಚ್ಚದಲ್ಲಿ ಕಾಲೇಜಿನ ಬಯಲು ರಂಗಮಂದಿರಕ್ಕೆ ಇಂಟರ್‌ಲಾಕ್ ಅಳವಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಕಾಲೇಜಿನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸುವ ಉದ್ದೇಶದಿಂದ ಈ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.











