Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಾಸನಗಳ ಅಧ್ಯಯನದಿಂದ ಇತಿಹಾಸ ಸಂಶೋಧನೆಗೆ ಬೆಳಕು: ಶ್ರುತೇಶ್ ಆಚಾರ್ಯ
    ಊರ್ಮನೆ ಸಮಾಚಾರ

    ಶಾಸನಗಳ ಅಧ್ಯಯನದಿಂದ ಇತಿಹಾಸ ಸಂಶೋಧನೆಗೆ ಬೆಳಕು: ಶ್ರುತೇಶ್ ಆಚಾರ್ಯ

    No Comments
    Facebook Twitter Pinterest LinkedIn WhatsApp Reddit Tumblr Email
    filter: 0; fileterIntensity: 0.0; filterMask: 0; hdrForward: 0; highlight: false; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 43;
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಶ್ರೀ ಕಾಳಾವರ ವರದರಾಜ್ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ-ಕೋಟೇಶ್ವರದ ಇತಿಹಾಸ ವಿಭಾಗ ಹಾಗೂ ಐಕ್ಯೂಎಸಿ (IQAC) ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ “Introduction to Epigraphy” (ಶಾಸನಶಾಸ್ತ್ರ ಪರಿಚಯ) ಕುರಿತು ಒಂದು ದಿನದ ವಿಶೇಷ ಕಾರ್ಯಾಗಾರವು ಇತ್ತೀಚೆಗೆ ಯಶಸ್ವಿಯಾಗಿ ಜರುಗಿತು.

    Click Here

    Call us

    Click Here

    ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುಷಾ ವಸ್ತುಸಂಗ್ರಹಾಲಯದ ಸಂಶೋಧಕರಾದ ಶ್ರುತೇಶ್ ಆಚಾರ್ಯ ಅವರು ಮಾತನಾಡಿ, ಶಾಸನಗಳನ್ನು ಓದುವ ವಿಧಾನ, ಅವುಗಳ ಐತಿಹಾಸಿಕ ಹಿನ್ನೆಲೆ ಹಾಗೂ ಸಂರಕ್ಷಣೆಯ ಅನಿವಾರ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಮಾಹಿತಿ ನೀಡಿದರು.

    ಕಾರ್ಯಾಗಾರದಲ್ಲಿ ಶಾಸನಗಳನ್ನು ಕೇವಲ ಕಲ್ಲಿನ ಮೇಲೆ ಕೆತ್ತಿದ ಅಕ್ಷರಗಳಾಗಿ ನೋಡದೆ, ಅವುಗಳಲ್ಲಿ ಅಡಕವಾಗಿರುವ ಸಾಮಾಜಿಕ, ರಾಜಕೀಯ, ಆರ್ಥಿಕ ಹಾಗೂ ಸಾಂಸ್ಕೃತಿಕ ಅಂಶಗಳನ್ನು ವಿಶ್ಲೇಷಿಸುವ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ಸವಿವರವಾದ ಮಾರ್ಗದರ್ಶನ ನೀಡಲಾಯಿತು. ಶಾಸನಗಳ ಅಧ್ಯಯನವು ಇತಿಹಾಸ ಸಂಶೋಧನೆಗೆ ಹೇಗೆ ಭದ್ರವಾದ ಬುನಾದಿಯಾಗುತ್ತದೆ ಎಂಬುದನ್ನು ಸಂಪನ್ಮೂಲ ವ್ಯಕ್ತಿಗಳು ಮನವರಿಕೆ ಮಾಡಿಕೊಟ್ಟರು.

    ​

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ವೈದ್ಯ ಎಂ. ಅವರು ಮಾತನಾಡಿ, “ಶಾಸನಗಳು ನಮ್ಮ ಪ್ರಾಚೀನ ಇತಿಹಾಸದ ಜೀವನಾಡಿಗಳಾಗಿದ್ದು, ಇಂದಿನ ವಿದ್ಯಾರ್ಥಿಗಳು ಶಾಸನಗಳ ಅಧ್ಯಯನದ ಕಡೆಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.

    Click here

    Click here

    Click here

    Call us

    Call us

    ಇದೇ ವೇಳೆ, 75ಕ್ಕೂ ಹೆಚ್ಚು ಶಾಸನಗಳನ್ನು ಓದಿ ಅತಿಥಿ ಸಂಶೋಧಕರಾಗಿ ಗುರುತಿಸಿಕೊಂಡಿರುವ ಶ್ರುತೇಶ್ ಆಚಾರ್ಯ ಅವರನ್ನು ವಿಶೇಷ ಸಾಧನೆಯನ್ನು ಅಭಿನಂದಿಸಿ, ಇತಿಹಾಸ ವಿಭಾಗದ ವತಿಯಿಂದ ಸನ್ಮಾನಿಸಲಾಯಿತು.

    ಇದೇ ಕಾಲೇಜಿನ ಹಳೆಯ ವಿದ್ಯಾರ್ಥಿನಿಯಾಗಿದ್ದು, ಪ್ರಸ್ತುತ ಬೈಂದೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿರುವ ಮಮತಾ ಅವರನ್ನು ಈ ಸಂದರ್ಭದಲ್ಲಿ ಕಾಲೇಜಿನ ಪರವಾಗಿ ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಎ. ಹಾಗೂ ಐಕ್ಯೂಎಸಿ ಸಂಯೋಜಕಿ ಮೋಹಿನಿ ಅತ್ತಿಮನಿ ಉಪಸ್ಥಿತರಿದ್ದರು.

    ಈ ಕಾರ್ಯಾಗಾರವು ಬಿ.ಎ. ವಿದ್ಯಾರ್ಥಿಗಳಿಗೆ ಶಾಸನಶಾಸ್ತ್ರದ ಕುರಿತು ಪ್ರಾಥಮಿಕ ಹಾಗೂ ಪ್ರಾಯೋಗಿಕ ಜ್ಞಾನವನ್ನು ಪಡೆಯಲು ಅತ್ಯಂತ ಉಪಯುಕ್ತವಾಯಿತು ಹಾಗೂ ವಿದ್ಯಾರ್ಥಿಗಳಲ್ಲಿ ಇತಿಹಾಸ ಸಂಶೋಧನೆಯ ಬಗ್ಗೆ ಹೊಸ ಉತ್ಸಾಹವನ್ನು ಮೂಡಿಸಿತು.

    ಇತಿಹಾಸ ವಿಭಾಗದ ಮುಖ್ಯಸ್ಥೆ ವೈಶಾಲಿ ಜಿ.ಆರ್. ಅವರು ಸ್ವಾಗತಿಸಿದರು. ಬಿ.ಎ. ವಿದ್ಯಾರ್ಥಿನಿ ಸೌಮ್ಯ ಬಿ.ಎಸ್. ಕಾರ್ಯಕ್ರಮವನ್ನು ನಿರೂಪಿಸಿ, ಸಮೃದ್ಧಿ ವಂದನಾರ್ಪಣೆ ಗೈದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಕಟ್ಟೆ ವಿಶ್ವವಿನಾಯಕ ಶಾಲೆಯ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ

    02/09/2026

    ಬಾರಕೂರು ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಓಣಂ ಸಂಭ್ರಮ

    02/09/2026

    ಗುಲ್ವಾಡಿ: ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ವ್ಯಕ್ತಿ ಸಾವು

    02/09/2026
    Leave A Reply Cancel Reply

    one × five =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಕಟ್ಟೆ ವಿಶ್ವವಿನಾಯಕ ಶಾಲೆಯ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ
    • ಬಾರಕೂರು ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಓಣಂ ಸಂಭ್ರಮ
    • ಗುಲ್ವಾಡಿ: ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ವ್ಯಕ್ತಿ ಸಾವು
    • ಕೋಟ: ಸರಕಾರಿ ಅಕ್ಕಿ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ – ಪ್ರಕರಣ ದಾಖಲು
    • ಶಾಸನಗಳ ಅಧ್ಯಯನದಿಂದ ಇತಿಹಾಸ ಸಂಶೋಧನೆಗೆ ಬೆಳಕು: ಶ್ರುತೇಶ್ ಆಚಾರ್ಯ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.