Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಸರಕಾರಿ ಅಕ್ಕಿ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ – ಪ್ರಕರಣ ದಾಖಲು
    ಊರ್ಮನೆ ಸಮಾಚಾರ

    ಕೋಟ: ಸರಕಾರಿ ಅಕ್ಕಿ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ – ಪ್ರಕರಣ ದಾಖಲು

    Updated:02/09/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಸರಕಾರಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದಾಗಿ ಆರೋಪ ಮಾಡಿ ಗುಜರಿ ವ್ಯಾಪಾರಿಯೊಬ್ಬರಲ್ಲಿ ಹಣಕ್ಕೆ ಬೇಡಿಕೆ ಇಟ್ಟು ಬೆದರಿಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click Here

    Call us

    Click Here

    ಗುಂಡ್ಮಿ ನಿವಾಸಿ ಗುಜರಿ ವ್ಯಾಪಾರಿ ಜಿ. ಮೊಹಮ್ಮದ್ ದೂರುದಾರರು. ಅವರಿಗೆ ಸಚಿನ್ ಕರೆ ಮಾಡಿ, ಎರಡು ಚೀಲ ಅಕ್ಕಿಯನ್ನು ನಿಮ್ಮ ಮನೆ ಅಂಗಳದಲ್ಲಿ ಇರಿಸಿರುವುದಾಗಿ ತಿಳಿಸಿದ್ದ.

    ಬಳಿಕ ಮೊಹಮ್ಮದ್ ಅವರು ಮನೆಗೆ ಆಗಮಿಸಿದಾಗ ಸಚಿನ್ ರಿಕ್ಷಾದಲ್ಲಿ ಹಾಗೂ ನಾಗೇಂದ್ರ ಪುತ್ರನ್ ಮತ್ತು ಪ್ರದೀಪ್ ಬೈಕ್‌ನಲ್ಲಿ ಅಲ್ಲಿಗೆ ಬಂದಿದ್ದರು. ಈ ಸಂದರ್ಭ ನಾಗೇಂದ್ರ ಪುತ್ರನ್ ತಾನು ಸಾಮಾಜಿಕ ಕಾರ್ಯಕರ್ತನೆಂದು ಪರಿಚಯಿಸಿಕೊಂಡು ಮನೆಯ ಅಂಗಳದಲ್ಲಿದ್ದ ಅಕ್ಕಿ ಚೀಲಗಳ ದೃಶ್ಯವನ್ನು ಚಿತ್ರೀಕರಿಸಿರುವುದಾಗಿ ಹೇಳಿದ್ದಾನೆ. ಸರಕಾರಿ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಕುರಿತು ದೂರು ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾನೆ.

    ಪ್ರಕರಣದಿಂದ ತಪ್ಪಿಸಿಕೊಳ್ಳಬೇಕಾದರೆ 2 ಲಕ್ಷರೂ. ನೀಡುವಂತೆ ಬೇಡಿಕೆ ಇಟ್ಟಿದ್ದು, ಹಣ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಅನಂತರ 1 ಲಕ್ಷ ರೂ. ನೀಡಬೇಕು. ಇಲ್ಲವಾದರೆ ಜನರನ್ನು ಹಾಗೂ ತನ್ನ ಹುಡುಗರನ್ನು ಕರೆಸಿ ಹೊಡೆದು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರನಲ್ಲಿ ವಿವರಿಸಲಾಗಿದೆ. ಮೊಹಮ್ಮದ್ ಅವರ ಮಕ್ಕಳು ಸ್ಥಳಕ್ಕೆ ಆಗಮಿಸಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾದರು ಎಂದೂ ದೂರಿನಲ್ಲಿ ತಿಳಿಸಲಾಗಿದೆ.

    ಘಟನೆಗೆ ಸಂಬಂಧಿಸಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click here

    Click here

    Click here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಕಟ್ಟೆ ವಿಶ್ವವಿನಾಯಕ ಶಾಲೆಯ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ

    02/09/2026

    ಬಾರಕೂರು ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಓಣಂ ಸಂಭ್ರಮ

    02/09/2026

    ಗುಲ್ವಾಡಿ: ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ವ್ಯಕ್ತಿ ಸಾವು

    02/09/2026
    Leave A Reply Cancel Reply

    sixteen − seven =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಕಟ್ಟೆ ವಿಶ್ವವಿನಾಯಕ ಶಾಲೆಯ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ
    • ಬಾರಕೂರು ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಓಣಂ ಸಂಭ್ರಮ
    • ಗುಲ್ವಾಡಿ: ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ವ್ಯಕ್ತಿ ಸಾವು
    • ಕೋಟ: ಸರಕಾರಿ ಅಕ್ಕಿ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ – ಪ್ರಕರಣ ದಾಖಲು
    • ಶಾಸನಗಳ ಅಧ್ಯಯನದಿಂದ ಇತಿಹಾಸ ಸಂಶೋಧನೆಗೆ ಬೆಳಕು: ಶ್ರುತೇಶ್ ಆಚಾರ್ಯ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.