ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೆಂಚಿನ ಕಾರ್ಖಾನೆ ಕಾರ್ಮಿಕರೊಬ್ಬರು ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಗುಲ್ವಾಡಿ ಶಾಲೆಯ ಬಳಿ ರಸ್ತೆಯಲ್ಲಿ ಸೋಮವಾರ ಸಂಭವಿಸಿದೆ. ಮೃತಪಟ್ಟವರು. ಕೋಣಿ ಗ್ರಾಮದ ನಿವಾಸಿ ಉಮೇಶ ಪೂಜಾರಿ (58) ಎಂದು ಗುರುತಿಸಲಾಗಿದೆ.
ಸೋಮವಾರ ಸಂಜೆ ಗುಲ್ವಾಡಿ ಶಾಲೆಯ ಬಳಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಸ್ಥಳೀಯರು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











