Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾರಕೂರು ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಓಣಂ ಸಂಭ್ರಮ
    ಊರ್ಮನೆ ಸಮಾಚಾರ

    ಬಾರಕೂರು ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಓಣಂ ಸಂಭ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಓಣಂ ಹಬ್ಬವನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ಆಚರಿಸಲಾಯಿತು.

    Click Here

    Call us

    Click Here

    “ಸಂಸ್ಕೃತಿ ಮತ್ತು ಸಂಪ್ರದಾಯಗಳ ಸಂಗಮ” ಎಂಬ ಆಶಯದೊಂದಿಗೆ ಆಯೋಜಿಸಲಾದ ಈ ಕಾರ್ಯಕ್ರಮವು ಕೇರಳದ ಸುಸಂಸ್ಕೃತ ಪರಂಪರೆ ಹಾಗೂ ಭಾರತೀಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಕಣ್ಣಿಗೆ ಕಟ್ಟುವಂತೆ ಅನಾವರಣಗೊಳಿಸಿತು. ಹೂವುಗಳಿಂದ ಸುಂದರವಾಗಿ ಅಲಂಕರಿಸಲಾಗಿದ್ದ ಹೂವಿನ ರಂಗೋಲಿ ಮುಂದೆ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, “ಹಬ್ಬಗಳು ಕೇವಲ ಸಂಭ್ರಮದ ಕ್ಷಣಗಳಷ್ಟೇ ಅಲ್ಲ; ಅವು ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಬಾಂಧವ್ಯವನ್ನು ಗಟ್ಟಿಗೊಳಿಸುವ ಸೇತುವೆಗಳು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಇಂತಹ ಆಚರಣೆಗಳು ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸುತ್ತವೆ” ಎಂದು ಶುಭ ಹಾರೈಸಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಖಜಾಂಚಿ ಭರತ್ ಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆ ಹಾಗೂ ಉತ್ಸಾಹ ಮೆಚ್ಚುವಂತದ್ದು. ನಮ್ಮ ಆಚರಣೆಗಳು ಮತ್ತು ಸಾಂಸ್ಕೃತಿಕ ಮೌಲ್ಯಗಳು ಕೇವಲ ಒಂದು ದಿನದ ಸಂಭ್ರಮಕ್ಕೆ ಸೀಮಿತವಾಗದೆ, ಜೀವನದುದ್ದಕ್ಕೂ ನಮ್ಮೊಂದಿಗೆ ಉಳಿಯಬೇಕು. ಸಂಸ್ಕೃತಿಯ ಬೇರುಗಳು ಗಟ್ಟಿಯಾಗಿದ್ದಾಗ ಮಾತ್ರ ಭವಿಷ್ಯದ ಪೀಳಿಗೆಯ ಹೆಜ್ಜೆಗಳು ದೃಢವಾಗಲು ಸಾಧ್ಯ” ಎಂದು ಕರೆ ನೀಡಿದರು.

    ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ಯ ಮಾತನಾಡಿ, “ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ದೇಶದ ವಿವಿಧ ನಾಡಿನ ಸಂಪ್ರದಾಯಗಳ ಬಗ್ಗೆ ಅರಿವು ಹಾಗೂ ಗೌರವವನ್ನು ಬೆಳೆಸಿಕೊಳ್ಳಲು ಉತ್ತಮ ವೇದಿಕೆಯಾಗುತ್ತವೆ”ಎಂದರು.

    Click here

    Click here

    Click here

    Call us

    Call us

    ಪ್ರಥಮ ಪಿಯುಸಿ ವಿದ್ಯಾರ್ಥಿ ಸುಚಿತ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಕಟ್ಟೆ ವಿಶ್ವವಿನಾಯಕ ಶಾಲೆಯ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ

    02/09/2026

    ಗುಲ್ವಾಡಿ: ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ವ್ಯಕ್ತಿ ಸಾವು

    02/09/2026

    ಕೋಟ: ಸರಕಾರಿ ಅಕ್ಕಿ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ – ಪ್ರಕರಣ ದಾಖಲು

    02/09/2026
    Leave A Reply Cancel Reply

    four × one =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಕಟ್ಟೆ ವಿಶ್ವವಿನಾಯಕ ಶಾಲೆಯ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ
    • ಬಾರಕೂರು ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಓಣಂ ಸಂಭ್ರಮ
    • ಗುಲ್ವಾಡಿ: ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ವ್ಯಕ್ತಿ ಸಾವು
    • ಕೋಟ: ಸರಕಾರಿ ಅಕ್ಕಿ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ – ಪ್ರಕರಣ ದಾಖಲು
    • ಶಾಸನಗಳ ಅಧ್ಯಯನದಿಂದ ಇತಿಹಾಸ ಸಂಶೋಧನೆಗೆ ಬೆಳಕು: ಶ್ರುತೇಶ್ ಆಚಾರ್ಯ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.