ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಬೈಂದೂರು ಇಲ್ಲಿ ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇವರ ಸಿ ಎಸ್ ಆರ್ ನಿಧಿಯಿಂದ ಶಾಲಾ ಸಭಾಂಗಣದ ಇಂಟರ್ಲಾಕ್ ಅಳವಡಿಕೆಗೆ ಭೂಮಿ ಪೂಜೆ ಹಾಗೂ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಸ್ಮಾರ್ಟ್ ಕ್ಲಾಸ್ ಇಂಟರ್ ಆಕ್ಟಿವ್ ಬೋರ್ಡ್ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಗುರುರಾಜ್ ಗಂಟಿಹೊಳೆ ಮಾನ್ಯ ಶಾಸಕರು ಬೈಂದೂರು ಇವರು ಶಾಲಾ ಅಭಿವೃದ್ಧಿಯಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳು ಊರ ವಿದ್ಯಾಭಿಮಾನಿಗಳು ತೊಡಗಿಸಿಕೊಂಡರೆ ಮಾತ್ರ ಉತ್ತಮ ಶಾಲಾ ಪರಿಸರ ಮತ್ತು ಶಾಲಾ ಶೈಕ್ಷಣಿಕ ವ್ಯವಸ್ಥೆ ನಿರ್ಮಾಣವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶಾಂತೇರಿ ಕಾಮಾಕ್ಷಿ ಎಂಟರ್ಪ್ರೈಸಸ್ ವತಿಯಿಂದ ಶಾಲಾ ಸುರಕ್ಷತಾ ದೃಷ್ಟಿಯಿಂದ ಬೆಂಕಿ ಶಮನ ಚೆಂಡು ಇದರ ಪ್ರಾತ್ಯಕ್ಷಿತೆ ಮತ್ತು ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಸಿಎಸ್ಆರ್ ಅನುದಾನ ತರಲು ಸಹಕರಿಸಿದ ಚರಣ್ ಬೈಂದೂರು ಅವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭೂಮಿ ಟ್ರಸ್ಟ್ ಪದಾಧಿಕಾರಿಗಳು, ರಾಜು ಪೂಜಾರಿ,ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು, ಸುರೇಶ ಬಟವಾಡಿ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು, ಸದಾಶಿವ ಡಿ ಪಡುವರಿ, ನಾಮ ನಿರ್ದೇಶಕ ಸದಸ್ಯರು ಪಟ್ಟಣ ಪಂಚಾಯತ್ ಬೈಂದೂರು, ವೆಂಕಟೇಶ ಕಿಣಿ, ಮಾಲಕರು ಶಾಂತೇರಿ ಕಾಮಾಕ್ಷಿ ಎಂಟರ್ಪ್ರೈಸಸ್ ಬೈಂದೂರು, ಗಣೇಶ್ ಪೂಜಾರಿ, ಮಾಜಿ ಅಧ್ಯಕ್ಷರು ಗ್ರಾಮ ಪಂಚಾಯತ್ ಯಡ್ತರೆ, ನಾಗೇಶ್ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿಯವರು ಬೈಂದೂರು, ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ವೆಂಕಟರಮಣ ದೇವಾಡಿಗ, ಗೋಪಾಲ್ ಪೂಜಾರಿ ವಸ್ರೆ, ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ಗಣಪತಿ ಹೋಬಳಿದಾರ್ ಸರ್ವರನ್ನು ಸ್ವಾಗತಿಸಿದರು. ಶಾಲಾ ಶಿಕ್ಷಕರಾದ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು. ಸುಜಾತ ಧನ್ಯವಾದ ಸಲ್ಲಿಸಿದರು.
















