Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜ್ಞಾನ, ಭಕ್ತಿ ಹಾಗೂ ಮುಕ್ತಿಗೆ ಅನ್ನವೇ ಆಧಾರ: ಶ್ರೀ ರಾಘವೇಶ್ವರ
    ಊರ್ಮನೆ ಸಮಾಚಾರ

    ಜ್ಞಾನ, ಭಕ್ತಿ ಹಾಗೂ ಮುಕ್ತಿಗೆ ಅನ್ನವೇ ಆಧಾರ: ಶ್ರೀ ರಾಘವೇಶ್ವರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗೋಕರ್ಣ:
    ಆತ್ಮ ಸಾಕ್ಷಾತ್ಕಾರಕ್ಕೂ ಶರೀರ ಅಗತ್ಯ. ಧರ್ಮಾರ್ಥ ಕಾಮ ಮೋಕ್ಷಗಳು ಶರೀರದಿಂದಲೇ ಸಾಧ್ಯವಾಗುವಂತದ್ದು. ಮನುಷ್ಯ ಶರೀರ ಇರುವುದೇ ಮೋಕ್ಷ ಸಾಧನೆಗೆ. ಹಾಗಾಗಿ ಶರೀರವನ್ನು ಉಳಿಸಿಕೊಂಡು, ಮೋಕ್ಷವನ್ನು ಪಡೆಯಲು ಆಹಾರ ಅಗತ್ಯವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

    Click Here

    Call us

    Click Here

    ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಮಂಗಳವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಶಿವ ಪಾರ್ವತಿಯರ ಮಧ್ಯೆ ವಾದ ನಡೆದ ಸಂಧರ್ಭವನ್ನು ಉದಾಹರಿಸಿ, ಶಿವನು ಭೌತಿಕ ಜಗತ್ತು ಮಿಥ್ಯೆ, ಶರೀರ ಮಾಯೆ, ಆಹಾರ ಸುಳ್ಳು, ಶುದ್ಧ ಚೈತನ್ಯ ಮಾತ್ರ ಸತ್ಯ ಎಂಬುದಾಗಿ ಹೇಳಿದ, ಆದರಿಂದ ಕುಪಿತಳಾದ ಪಾರ್ವತಿಯು, ಕಾಶಿಯಲ್ಲಿ ಅನ್ನಪೂರ್ಣೇಶ್ವರಿಯಾಗಿ ಅವತರಿಸಿದಳು. ಆನಂತರ ಶಿವನು ಭಿಕ್ಷುಕನ ರೂಪದಲ್ಲಿ ‘ಭವತಿ ಭಿಕ್ಷಾಂ ದೇಹಿ’ ಎಂದು ಕೇಳಿದ ಎಂಬ ಕಥೆಯನ್ನು ಉಲ್ಲೇಖಿಸಿ, ಇದು ಅನ್ನದ ಮಹತ್ವವನ್ನು ಲೋಕಕ್ಕೆ ಸಾರಲು ಆದಿದಂಪತಿಗಳು ಆಡಿದ ನಾಟಕ ಎಂದು ವಿವರಿಸಿದರು.

    ಶಿವ ವಾದ ರೂಪದಲ್ಲಿ ಪ್ರತಿಪಾದಿಸದ್ದನ್ನೇ ಪಾರ್ವತಿ ಅನ್ನಪೂರ್ಣೇಶ್ವರಿಯಾಗಿ ಅನುಭವ ರೂಪವಾಗಿ ತೋರಿದವಳು. ಶಿವ ಅನ್ನದ ಮಹತಿಯನ್ನು ಒಪ್ಪಿಕೊಂಡರೆ, ಪಾರ್ವತಿ ಮುಕ್ತಿಯ ಮಹತಿಯನ್ನು ಒಪ್ಪಿಕೊಂಡಳು. ಭೌತಿಕ ಜಗತ್ತು, ಶರೀರ, ಆಹಾರ ಇವೆಲ್ಲವೂ ವ್ಯಾವಹಾರಿಕ ಸತ್ಯವಾದರೆ, ಮೋಕ್ಷ ಪರಮಸತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. 

    ಅನ್ನಪೂರ್ಣೇಶ್ವರಿ ಜ್ಞಾನದ ಅನುಗ್ರಹವನ್ನು ವಿಶೇಷವಾಗಿ ಮಾಡುತ್ತಾಳೆ. ಶಂಕರಾಚಾರ್ಯರು ಅನ್ನಪೂರ್ಣೇಶ್ವರಿ ಸ್ತೋತ್ರದ ಮೂಲಕ ದೇವಿಯನ್ನು ಸ್ತುತಿಸಿದ್ದು, ಆ ಸ್ತೋತ್ರವನ್ನು ಗಮನಿಸಿದರೆ, ಜ್ಞಾನ, ಭಕ್ತಿ, ಮುಕ್ತಿ ಎಲ್ಲವೂ ಅನ್ನ ಅಥವಾ ಅನ್ನಪೂರ್ಣೇಶ್ವರಿಯಿಂದಲೇ ಪ್ರಾಪ್ತವಾಗುತ್ತದೆ ಎಂಬುದನ್ನು ಕಾಣಬಹುದು ಎಂದರು.

    ಖ್ಯಾತ ಜ್ಯೋತಿಷಿಗಳಾದ ಪಾಲಕ್ಕಾಡು ವೆಂಕಟೇಶ ಭಟ್, ಶ್ರೀ ಶಕಟಪುರಮಠದ ವ್ಯವಸ್ಥಾಪಕ ರಾಘವ, ನಿವೃತ್ತ ಆದಾಯ ತೆರಿಗೆ ಆಯುಕ್ತ ಗಿರೀಶ ಕೊಣಮ್ಮೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀಗಳಿಂದ ಆಶೀರ್ವಾದ ಪಡೆದರು.

    Click here

    Click here

    Click here

    Call us

    Call us

    ಗಣಪತಿ ವೆಂಕಟರಮಣ ಹೆಗಡೆ ಕಾನಮೂಲೆ ಕುಟುಂಬದವರು ಗುರುಭಿಕ್ಷಾ ಸೇವೆ ಸಮರ್ಪಿಸಿದರು. ಸವಿತಾ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ನಡೆಯಿತು. ಈಶ್ವರ ಕೊಡಿಯಾ ದಂಪತಿಗಳು ಪಾದುಕಾಪೂಜೆಯನ್ನು ನೆರವೇರಿಸಿದರು. ದಿನಪ್ರಧಾನರಾಗಿ ಎಮ್.ಎನ್.ಹರೀಶ ದಂಪತಿಗಳು ಉಪಸ್ಥಿತರಿದ್ದರು.

    ಸಾಮವೇದ ಪಾರಾಯಣ –  ರಾಣಾಯನೀಯ ಶಾಖೆಯ ಸಂರಕ್ಷಣೆಗೆ ಒತ್ತು:
    ಚಾತುರ್ಮಾಸ್ಯದ ಶುಭ ಸಂದರ್ಭದಲ್ಲಿ ಸಾಮವೇದದ ರಾಣಾಯನೀಯ ಶಾಖೆಯ ಪಾರಾಯಣವು 01.09.2026 ರಿಂದ 05.09.2026 ವರೆಗೆ ನಡೆಯಲಿದ್ದು, ವೇ.ಮೂ ಸುಬ್ರಹ್ಮಣ್ಯ ಭಟ್ಟರು ಉಂಚಗೇರಿ ಅವರ ನೇತೃತ್ವದ ವೇದ ವಿದ್ವಾಂಸರಿಂದ ಪಾರಾಯಣ ಪ್ರಾರಂಭವಾಯಿತು. 

    ಸಾವಿರ ಶಾಖೆಗಳನ್ನು ಹೊಂದಿದ್ದ ಸಾಮವೇದದಲ್ಲಿ ಇಂದು ಬೆರಳೆಣಿಕೆಯ ಶಾಖೆಗಳು ಮಾತ್ರ ಉಳಿದಿದ್ದು, ರಾಣಾಯನೀಯ ಶಾಖೆಯು ಶ್ರೀಮಠದ ವ್ಯಾಪ್ತಿಯ ಹೊನ್ನಾವರದ ಭಾಗದಲ್ಲಿ ಮಾತ್ರ ಉಳಿದುಕೊಂಡಿದೆ. ರಾಣಾಯನೀಯ ಶಾಖೆಯ ಸಂರಕ್ಷಣೆಗಾಗಿ ಶ್ರೀಮಠದ ಮಾರ್ಗದರ್ಶನದಲ್ಲಿ ಅನೇಕ ಕಾರ್ಯಗಳು ನಡೆದಿದ್ದು, ಶ್ರೀಮಠವು ಸಾಮವೇದ ಶಾಖೆಯ ಉಳಿವಿಗಾಗಿ ರಾಷ್ಟ್ರೀಯ ಸಮ್ಮೇಳನವನ್ನೂ ಸಂಘಟಿಸಿತ್ತು. ಕೆಲವಾರು ತಿಂಗಳುಗಳ ಹಿಂದೆ ರಾಣಾಯನೀಯ ಸಭಾದವರು ಪ್ರಕಾಶಿಸಿದ ‘ಸಾಮವೇದ ರಾಣಾಯನೀಯಮ್ ವೇಯಗಾನಮ್’ ಗ್ರಂಥವನ್ನು ಶ್ರೀಗಳು ಲೋಕಾರ್ಪಣೆ ಮಾಡಿ ಆಶೀರ್ವದಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಕಟ್ಟೆಯಲ್ಲಿ ಪೋಷಣ್ ಅಭಿಯಾನ ಜಾಗೃತಿ ಕಾರ್ಯಕ್ರಮ

    02/09/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

    02/09/2026

    ಬೈಂದೂರು ಸ.ಮಾ. ಶಾಲೆ: ಇಂಟರ್ಲಾಕ್ ಅಳವಡಿಕೆಗೆ ಭೂಮಿ ಪೂಜೆ, ಕಂಪ್ಯೂಟರ್‌ ಲ್ಯಾಬ್‌ ಉದ್ಘಾಟನೆ

    02/09/2026
    Leave A Reply Cancel Reply

    three × five =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಕಟ್ಟೆಯಲ್ಲಿ ಪೋಷಣ್ ಅಭಿಯಾನ ಜಾಗೃತಿ ಕಾರ್ಯಕ್ರಮ
    • ಅಂಗನವಾಡಿ ಕಾರ್ಯಕರ್ತೆ – ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ
    • ಜ್ಞಾನ, ಭಕ್ತಿ ಹಾಗೂ ಮುಕ್ತಿಗೆ ಅನ್ನವೇ ಆಧಾರ: ಶ್ರೀ ರಾಘವೇಶ್ವರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ
    • ಬೈಂದೂರು ಸ.ಮಾ. ಶಾಲೆ: ಇಂಟರ್ಲಾಕ್ ಅಳವಡಿಕೆಗೆ ಭೂಮಿ ಪೂಜೆ, ಕಂಪ್ಯೂಟರ್‌ ಲ್ಯಾಬ್‌ ಉದ್ಘಾಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.