ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ರೋಟರಿ ಕ್ಲಬ್ ತೆಕ್ಕಟ್ಟೆ ವತಿಯಿಂದ ತೆಕ್ಕಟ್ಟೆ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ರೋಟರಿ ಕ್ಲಬ್ ಅಧ್ಯಕ್ಷ ಟಿ. ರಾಜೀವ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುಂಭಾಶಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ರಾಘವೇಂದ್ರ ಹೆಬ್ಬಾರ್ ಹಾಗೂ ಸಿಡಿಪಿಒ ಉಮೇಶ್ ಅವರು ಪೋಷಣ್ ಅಭಿಯಾನದ ಮಹತ್ವ ಮತ್ತು ಮಕ್ಕಳ ಆರೋಗ್ಯಕರ ಬೆಳವಣಿಗೆಯಲ್ಲಿ ಪೌಷ್ಟಿಕಾಂಶದ ಪಾತ್ರದ ಕುರಿತು ಮಾಹಿತಿ ನೀಡಿದರು.
ಸುಮಾರು 25 ರಿಂದ 30 ಮಹಿಳೆಯರು, ಮುಖ್ಯವಾಗಿ ಮಕ್ಕಳ ತಾಯಂದಿರು, ಅಂಗನವಾಡಿ ಹಾಗೂ ಪಿಎಚ್‌ಸಿ ಸಿಬ್ಬಂದಿಗಳು, ರೋಟರಿ ಸದಸ್ಯರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕೊನೆಯಲ್ಲಿ ರೋಟೇರಿಯನ್ ಚಂದ್ರಶೇಖರ ಶೆಟ್ಟಿ ವಂದನಾರ್ಪಣೆ ಸಲ್ಲಿಸಿದರು.











