ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗಂಗೊಳ್ಳಿಯ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟೊಂದು ನೀರಿನ ಸುಳಿಗೆ ಸಿಲುಕಿ ಮುಳುಗಡೆಯಾದ ಘಟನೆ ಬುಧವಾರ ಸಂಭವಿಸಿದೆ.
ಬೋಟ್‌ನಲ್ಲಿದ್ದ ಸುಮಾರು ಆರು ಮಂದಿ ಮೀನುಗಾರರನ್ನು ತಕ್ಷಣವೇ ರಕ್ಷಿಸಲಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅಪಘಾತಕ್ಕೀಡಾದ ಬೋಟನ್ನು ಸದ್ಯ ಯಶಸ್ವಿಯಾಗಿ ದಡಕ್ಕೆ ತರಲಾಗಿದೆ.
ಕಳೆದ ವಾರಷ್ಟೇ ಗಂಗೊಳ್ಳಿ ಅಳಿವೆ ಬಾಗಿಲಿನಲ್ಲಿ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ಬೋಟು ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಆ ಸಂದರ್ಭದಲ್ಲೂ ಕ್ಷಿಪ್ರ ಕಾರ್ಯಚರಣೆ ನಡೆಸಿ ಬೋಟ್ ನಲ್ಲಿದ್ದ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಇಂದು ಮತ್ತೊಂದು ಬೋಟ್ ಅಪಘಾತಕ್ಕೆ ಸಿಲುಕಿರುವುದು ಸ್ಥಳೀಯ ಮೀನುಗಾರರಲ್ಲಿ ಆತಂಕ ಹೆಚ್ಚಿಸಿದೆ.
ಇದನ್ನೂ ಓದಿ
► ಗಂಗೊಳ್ಳಿ: ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್ ಮುಳುಗಡೆ: 27 ಮಂದಿ ಮೀನುಗಾರರ ರಕ್ಷಣೆ – https://kundapraa.com/?p=101294 .











