ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಜಿಲ್ಲೆಯ 5 ರಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸೆಪ್ಟಂಬರ್ 30ರ ಒಳಗಾಗಿ ಸಲ್ಲಿಸಬಹುದಾಗಿದೆ. ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಪಡೆದ ಮಕ್ಕಳು ಮತ್ತೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯ ದೂ.ಸಂಖ್ಯೆ :0820-2574978 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.











