ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೈಗಾರಿಕೆ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕೈಗಾರಿಕೋದ್ಯಮಿಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ಹೊಸದಾಗಿ ಅತೀ ಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸುವ ಉದ್ಯಮಿಗಳು ಬ್ಯಾಂಕ್‌ಗಳಲ್ಲಿ ಪಡೆದ ಸಾಲವನ್ನು ಹೊರತುಪಡಿಸಿ ತಾವು ತೊಡಗಿಸುವ ಬಂಡವಾಳದ ಅರ್ಧದಷ್ಟು ಹಣವನ್ನು ಬಡ್ಡಿರಹಿತ ಸಾಲದ ರೂಪದಲ್ಲಿ ನೀಡಲಾಗುವುದು, ಘಟಕದ ಸ್ಥಿರ ಬಂಡವಾಳದ ಶೇ.60 ರಷ್ಟು ಸಹಾಯಧನ, ಬ್ಯಾಂಕ್‌ಗಳಲ್ಲಿ ಸಾಲ ಪಡೆಯುವ ಸಂದರ್ಭದಲ್ಲಿ ಬ್ಯಾಂಕ್‌ಗಳಿಂದ ವಿಧಿಸಲಾಗುವ ಸಾಲ ಪ್ರಕ್ರಿಯೆ ಶುಲ್ಕ ಮರುಪಾವತಿ ಹಾಗೂ ವಿದ್ಯುತ್ ಇಲಾಖೆಯಿಂದ ವಿಧಿಸಲಾಗುವ ವಿದ್ಯುತ್ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು.
ಮೇಲ್ಕಂಡ ಸೌಲಭ್ಯಗಳು ಗುರಿ ಆಧಾರಿತವಾಗಿದ್ದು, ಹೊಸದಾಗಿ ಅತೀಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಆಸಕ್ತ ಉದ್ಯಮಿಗಳು ಸೆಪ್ಟಂಬರ್ 15ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ಲಾಟ್ ನಂ: 36-ಸಿ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಕಛೇರಿಯಿನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
















