ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕ್ಷೇತ್ರ ಶಿಕ್ಷಣಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ವೃತ್ತ ಮಟ್ಟದ 14 ವರ್ಷದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ.
ಬಾಲಕಿಯರ ತಂಡದಲ್ಲಿ ಸನ್ನಿಧಿ, ಮನ್ವಿತಾ, ಧನ್ಯ ಖಾರ್ವಿ, ಆಶಿತಾ ಖಾರ್ವಿ, ಅಪೇಕ್ಷಾ, ಸನ್ನಿಧಿ, ಶ್ರೀಲಕ್ಷ್ಮಿ, ಅನ್ವಿತಾ, ಶ್ರಾವಣಿ, ತನುಶ್ರೀ, ಅದಿತಿ ಪ್ರತಿನಿಧಿಸಿದ್ದರು.
ದೈಹಿಕ ಶಿಕ್ಷಣ ಶಿಕ್ಷಕರಾದ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು. ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಬೋಧಕ ವೃಂದ ಮತ್ತು ಶಿಕ್ಷಕ – ರಕ್ಷಕ ಸಮಿತಿ ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದರು.











