ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಉಡುಪಿ ಆದರ್ಶ ಚಾರಿಟೇಬಲ್ ಟ್ರಸ್ಟ್, ಆದರ್ಶ ಸಮೂಹ ಸಂಸ್ಥೆಗಳು, ಆದರ್ಶ ಆಸ್ಪತ್ರೆ ಮತ್ತು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾ| ಎಸ್. ರಾಧಾಕೃಷ್ಣನ್ ಜನ್ಮ ಜಯಂತಿ ಅಂಗವಾಗಿ ನೀಡುವ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕೋಟ ಸುಜಯೀಂದ್ರ ಹಂದೆ ಭಾಜನರಾಗಿದ್ದಾರೆ.
ಕಲೆ, ಶಿಕ್ಷಣ, ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಹಂದೆಯವರು ಕಳೆದ 29 ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸೆಪ್ಟೆಂಬರ್ 06ರಂದು ಉಡುಪಿ ಅಲೆವೂರಿನ ಆದರ್ಶ ಸಮೂಹ ವಿದ್ಯಾ ಸಂಸ್ಥೆಗಳ ಸಂಕೀರ್ಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.











