ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕಿರಿಮಂಜೇಶ್ವರದ ಜನತಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ವತಿಯಿಂದ ‘ಜನತಾ ರಸಬುಗ್ಗೆ 3.0’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸೆಪ್ಟೆಂಬರ್ 06ರಂದು ಬೆಳಗ್ಗೆ 8.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಡ್ರಾಮ ಜ್ಯುನಿಯರ್ ಖ್ಯಾತಿಯ ಅಸ್ಮಿತ್ ಎ.ಜೆ. ಭಾಗವಹಿಸಲಿದ್ದಾರೆ.
‘ಮುದ್ದು ಕೃಷ್ಣ–ಮುದ್ದು ರಾಧೆ’ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಮಕ್ಕಳಿಗಾಗಿ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಯಲ್ಲಿ 1 ವರ್ಷದಿಂದ 3 ವರ್ಷದೊಳಗಿನ ಮಕ್ಕಳಿಗೆ ಹಾಗೂ 3 ವರ್ಷ ಮೇಲ್ಪಟ್ಟು 6 ವರ್ಷದೊಳಗಿನ ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದೆ.
ಸ್ಪರ್ಧೆಯಲ್ಲಿ ವಿಜೇತರಾಗುವವರಿಗೆ ಆಕರ್ಷಕ ಬಹುಮಾನಗಳಿದ್ದು, ಪ್ರಥಮ ಬಹುಮಾನ ₹15,999, ದ್ವಿತೀಯ ₹13,999, ತೃತೀಯ ₹12,999,ಒಟ್ಟು 10 ನಗದು ಬಹುಮಾನಗಳು.ಹಾಗೂ 25 ಸಮಾಧಾನಕರ ಬಹುಮಾನಗಳನ್ನು ನೀಡಲಾಗುತ್ತದೆ.ಹಾಗೂ ಮಕ್ಕಳ ಪೋಷಕರಿಗೆ ಅದೃಷ್ಟ ಕೂಪನ್, ಚಿನ್ನ ಮತ್ತು ಬೆಳ್ಳಿಯ ನಾಣ್ಯ, 25 ಸಮಾಧಾನಕರ ಬಹುಮಾನಗಳು ಹಾಗೂ ಭಾಗವಹಿಸಿದ ಎಲ್ಲ ಸ್ಪರ್ಧಿಗಳಿಗೂ ಪದಕ ಹಾಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು.
ನೋಂದಣಿಗಾಗಿ: 8217532590, 7348978501
ಸ್ಥಳ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರ.
















