ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿನ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದ ಬಾಲಕರ ವಿಭಾಗ ಮತ್ತು ಬಾಲಕಿಯರ ವಿಭಾಗದ ಎರಡೂ ವಿಭಾಗಗಳಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದದ ಬಾಲಕರ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನವನ್ನು ಗಳಿಸಿವೆ.

ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ. ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸುಕೇಶ್ ಶೆಟ್ಟಿ, ಬ್ಯಾರಿಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಇದರ ದೈಹಿಕ ಶಿಕ್ಷಣ ಶಿಕ್ಷಕರಾದ ಮೊಹಮದ್ ಇಲಿಯಾಸ್ ಅವರು ಅತಿಥಿಗಳಾಗಿದ್ದರು.
ಉಪನ್ಯಾಸಕರದ ಶ್ರೀಲಕ್ಷ್ಮಿ ಕೆ.ಎಸ್. ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕರಾದ ವೀರಭದ್ರಪ್ಪ ದಾವಣಗೆರೆ ವಂದಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿಯಾದ ಸಾವಿತ್ರಿ ಎಸ್. ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರು ಭೋದಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.











