ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿಯಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿಯಿರುವ ಪಿ & ಒ ಇಂಜಿನಿಯರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Bachelor of Prosthetic and Orthotics(BPO) Diploma in Prosthetic and Orthotics(DPO)ವಿದ್ಯಾರ್ಹತೆಯೊಂದಿಗೆ ಸದ್ರಿ ಕ್ಷೇತ್ರದಲ್ಲಿ 2 ರಿಂದ 5 ವರ್ಷ ಅನುಭವ ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 17ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್ ಕ್ರಾಸ್ ಭವನ, ಅಜ್ಜರಕಾಡು, ಉಡುಪಿ ದೂ.ಸಂ: 0820-2533372, 9964583433 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.











