ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಳಾವರ ನಿವಾಸಿ ಸುಧಾಕರ ಶೆಟ್ಟಿ (40) ಎಂಬ ವ್ಯಕ್ತಿಯು ಶಿವಮೊಗ್ಗದ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದು, ಆಗಾಗ ಮನೆಗೆ ಬಂದು ಹೋಗುತ್ತಿರುತ್ತಾರೆ.
ಮೇ. 07ರಂದು ಬೆಳಗ್ಗೆ 10.30 ರ ಸುಮಾರಿಗೆ ಶಿವಮೊಗ್ಗದಿಂದ ಮನೆಗೆ ಬಂದಿದ್ದು, ಅದೇ ದಿನ ಸಂಜೆ ಶಿವಮೊಗ್ಗಕ್ಕೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರೂ ಕೆಲಸಕ್ಕೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ಮೊ.ನಂ: 9480805433 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.











