Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ
    ಉಡುಪಿ ಜಿಲ್ಲೆ

    ಉಡುಪಿ: ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ರೈತರು ಕೃಷಿ ಸೇರಿದಂತೆ ಹೈನುಗಾರಿಕೆ ಚಟುವಟಿಕೆ ಕೈಗೊಳ್ಳಲು ಅಗತ್ಯವಿರುವ ಸಾಲ ಸೌಲಭ್ಯಗಳನ್ನು ಅರ್ಹರಿಗೆ ಸಮರ್ಪಕವಾಗಿ ಒದಗಿಸಿ, ಅವರು ಆರ್ಥಿಕವಾಗಿ ಸ್ವಾವಲಂಭಿಗಳಾಗಲು ಪ್ರೋತ್ಸಾಹಿಸುವ ಕಾರ್ಯವನ್ನು ಬ್ಯಾಂಕುಗಳು ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದ್ದಾರೆ.

    Click Here

    Call us

    Click Here

    ಅವರು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರದ ವಿವಿಧ ಯೋಜನೆಗಳಡಿ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕ ನೆರವು ಕೋರಿ ಬ್ಯಾಂಕುಗಳಿಗೆ ಬರುವ ರೈತರು, ಸಾರ್ವಜನಿಕರು ಹಾಗೂ ಮಹಿಳಾ ಫಲಾನುಭವಿಗಳೊಂದಿಗೆ ಸೌಹಾರ್ದತವಾಗಿ ನಡೆದು ಕೊಳ್ಳುವುದರೊಂದಿಗೆ ಅವರುಗಳು ನೆರವು ಪಡೆಯಲು ಅನುಕೂಲ ಮಾಡಿಕೊಡಬೇಕು ಎಂದರು.

    ಸೈಬರ್ ವಂಚನೆ ಬಗ್ಗೆ ಅರಿವು:
    ಹಣಕಾಸಿನ ವಂಚನೆಯನ್ನು ತಡೆಗಟ್ಟಲು ವಹಿವಾಟು ಉದ್ದೇಶಗಳಿಗಾಗಿ 1600 ಫೋನ್ ಸಂಖ್ಯೆ ಸರಣಿಯನ್ನು ಮಾತ್ರ ಬಳಸುವಂತೆ ಬ್ಯಾಂಕುಗಳಿಗೆ ಆರ್‌ಬಿಐ ನಿರ್ದೇಶನ ನೀಡಿದೆ. ಎಲ್ಲಾ ಬ್ಯಾಂಕುಗಳು ವಹಿವಾಟು-ಸಂಬಂಧಿತ ಕರೆಗಳಿಗೆ 1600ರಿಂದ ಪ್ರಾರಂಭವಾಗುವ ಫೋನ್ ಸಂಖ್ಯೆಗಳನ್ನು ಬಳಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಅವರು ತಿಳಿಸಿದರು.

    ಸೈಬರ್‌ ವಂಚನೆಯಿಂದ ಹಣ ಕಳೆದುಕೊಂಡ ಗ್ರಾಹಕರು ಬ್ಯಾಂಕುಗಳಿಗೆ ವಿಚಾರಿಸಲು ಬಂದಾಗ ಅವರೊಂದಿಗೆ ಸೌಜನ್ಯಯುತವಾಗಿ ನಡೆದುಕೊಳ್ಳುವುದರೊಂದಿಗೆ ಸಲಹೆ ಸೇರಿದಂತೆ ಮತ್ತಿತರ ತಿಳುವಳಿಕೆಗಳನ್ನು ನೀಡಬೇಕು. ಸಾರ್ವಜನಿಕರು ಈ ರೀತಿಯ ವಂಚನೆಗೊಳಗಾದಂತೆ ನೋಡಿಕೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅವರುಗಳಿಗೆ ಅರಿವು ಮೂಡಿಸಬೇಕು.

    ನಿಯಮಾನುಸಾರ ಅವರುಗಳಿಗೆ ಪರಿಹಾರ ಒದಗಿಸಲು ಅವಕಾಶವಿದ್ದಲ್ಲಿ ಅವರಿಗೆ ನೀಡಬೇಕು. ಪೊಲೀಸರು ಪ್ರಕರಣ ಸಂಬಂಧ ತನಿಖೆಗೆ ಬಂದಾಗ ಅವರೊಂದಿಗೆ ಸಹಕರಿಸಬೇಕೆಂದು ಅವರು ತಿಳಿಸಿದರು.

    Click here

    Click here

    Click here

    Call us

    Call us

    ಠೇವಣಿ ಅನುಪಾತ ಇಳಿಕೆ:
    ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ-1ರ ರೀಜನಲ್ ಮ್ಯಾನೆಜ‌ರ್ ತದಿನಾಡ ಶ್ರೀನಾಗ ಪೂರ್ಣಾನಂದ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಜೂನ್ ಮಾಹೆಯ ಅಂತ್ಯದವರೆಗೆ ಜಿಲ್ಲೆಯ ಒಟ್ಟು 440 ಶಾಖೆಗಳಲ್ಲಿ ಠೇವಣಿ 48715.93 ಕೋಟಿ ರೂ., ಮುಂಗಡ ಠೇವಣಿ 24,184.84 ಕೋಟಿ ಸೇರಿದಂತೆ ಒಟ್ಟು ಬ್ಯಾಂಕುಗಳಲ್ಲಿ 72,900.77 ಕೋಟಿ ರೂ. ವಹಿವಾಟು ನಡೆದಿದ್ದು, ಬ್ಯಾಂಕುಗಳ ಠೇವಣಿ ಅನುಪಾತ ಶೇ.49.64 ಇದೆ. ಈ ಪ್ರಮಾಣವು ರೀಸರ್ವ್ ಬ್ಯಾಂಕ್ ಮಾರ್ಗಸೂಚಿಯಂತೆ ಕನಿಷ್ಠ ಶೇ.60 ಇರಬೇಕಾಗಿದೆ ಎಂದರು.

    ಜಿಲ್ಲೆಗೆ ಪ್ರಸಕ್ತ ಸಾಲಿಗೆ ಆದ್ಯತೆಯ ಮತ್ತು ಆದ್ಯತೆಯೇತರ ವಲಯ ಗಳೆರಡಕ್ಕೂ ಒಟ್ಟಾರೆಯಾಗಿ 18,532.26 ಕೋಟಿ ವಾರ್ಷಿಕ ಕ್ರೆಡಿಟ್ ಯೋಜನೆ ಗುರಿಯನ್ನು ನಿಗದಿಪಡಿಸಲಾಗಿದ್ದು, ಈವರೆಗೆ 7,302.87 ಕೋಟಿ ರೂ. ಗುರಿ ಎ ಬಸಿ, ಶೇ. 39.41 ಸಾಧನೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

    ಕೃಷಿ ವಲಯದಲ್ಲಿ 4801.25 ಕೋಟಿ ನಿಗಧಿತ ಗುರಿಗೆ 1653.82 ಗುರಿ ಸಾಧಿಸಿ ಶೇ.34.45, ಎಂ.ಎಸ್.ಎಂ.ಇ ವಲಯಕ್ಕೆ 4192.82 ಕೋಟಿ ನಿಗಧಿತ ಗುರಿಗೆ 2158.61 ಗುರಿ ಸಾಧಿಸಿ ಶೇ. 51.48 ರಷ್ಟು, ಶಿಕ್ಷಣ ವಲಯದಲ್ಲಿ 231.82 ಕೋಟಿ ರೂ. ನಿಗಧಿತ ಗುರಿಗೆ 39.29 ಗುರಿ ಸಾಧಿಸಿ ಶೇ.16.95ರಷ್ಟು ವಸತಿ ಕ್ಷೇತ್ರಗಳಿಗೆ 264.54 ಕೋಟಿ ರೂ. ನಿಗಧಿತ ಗುರಿಗೆ 69.64 ಗುರಿ ಸಾಧಿಸಿ ಶೇ. 26.32ರಷ್ಟು, ಇತರೆ ಕ್ಷೇತ್ರಗಳಿಗೆ 373.47 ಕೋಟಿ ರೂ. ನಿಗಧಿತ ಗುರಿಗೆ, 186.45 ಗುರಿ ಸಾಧಿಸಿ ಶೇ. 49.92 ಹಾಗೂ ಆದ್ಯತೇತರ ವಲಯಗಳಿಗೆ 8668.37 ಕೋಟಿ ರೂ. ನಿಗಧಿತ ಗುರಿಗೆ, 3195.06 ರಷ್ಟು ಗುರಿ ಸಾಧಿಸಿ ಶೇ. 36.86ರಷ್ಟು ಸಾಧನೆ ಮಾಡಲಾಗಿದೆ ಎಂದರು.

    ಸಭೆಯಲ್ಲಿ ಜಿಲ್ಲಾ ಲೀಡ್‌ ಬ್ಯಾಂಕ್‌ ಮ್ಯಾನೇಜ‌ರ್ ಹರೀಶ್‌, ಆರ್‌ಬಿಐ ಎ.ಜಿ.ಎಂ. ನಿಶಾ ಠಾಕೂ‌ರ್, ಎಸ್‌ಸಿಡಿಸಿಸಿ ಬ್ಯಾಂಕಿನ ಅಸಿಸ್ಟೆಂಟ್‌ ಜನರಲ್‌ ಮ್ಯಾನೆಜ‌ರ್ ರಾಜೇಶ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕುಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.

    ‘ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿಯೋಜನೆಯು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದೇಶದ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಸುಲಭವಾಗಿ ಶಿಕ್ಷಣ ಸಾಲ ನೀಡುವ ಯೋಜನೆಯಾಗಿದ್ದು, ಈ ಬಗ್ಗೆ ಜಿಲ್ಲೆಯ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಭೇಟಿ ಮಾಡಿ, ಯೋಜನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು’

    ಬ್ಯಾಂಕಿನ ಆಂತರಿಕ ನಿಯಮಗಳಿಗೆ ಅನುಗುಣವಾಗಿ ಸಣ್ಣ ಮೊತ್ತದ ವಂಚನಾತ್ಮಕ ಎಲೆಕ್ಟ್ರಾನಿಕ್ ಬ್ಯಾಂಕಿಂಗ್‌ ವೈವಾಟುಗಳಿಂದ ವ್ಯಕ್ತಿಯ ನಷ್ಟವು ನಿಜವಾದದ್ದು ಎಂದು ಸಾಧಿಸಿದಲ್ಲಿ, ರಾಷ್ಟ್ರೀಯ ಸೈಬರ್ ಅಪರಾಧ ವರದಿ ಮಾಡುವ ಪೋರ್ಟಲ್ ಅಥವಾ ರಾಷ್ಟ್ರೀಯ ಸೈಬ್ ಅಪರಾಧ ಸಹಾಯ ವಾಣಿನಲ್ಲಿ ನಿಗದಿತ ಅವಧಿಯಲ್ಲಿ ಪ್ರಕರಣ ದಾಖಲಿಸಿದ್ದಲ್ಲಿ ನಿಜ ನಷ್ಟದ ಮೊತ್ತದ ಶೇ.85ರಷ್ಟು ಅಥವಾ 25,000ರೂ.(ಯಾವುದು ಕಡಿಮೆಯೋ ಅದನ್ನು)ವನ್ನು ಅವರ  ಜೀವಿತಾವಧಿಯಲ್ಲಿ ಒಂದು ಬಾರಿ ಮಾತ್ರ ಪರಿಹಾರವಾಗಿ ನೀಡಲಾಗುವುದು. ಈ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಆರ್‌ಬಿಐ ಎ.ಜಿ.ಎಂ. ನಿಶಾ ಠಾಕೂರ್ ತಿಳಿಸಿದರು.

    ಜಿಲ್ಲಾ ಲೀಡ್‌ ಬ್ಯಾಂಕ್‌ ಮ್ಯಾನೇಜರ್ ಹರೀಶ್ ಮಾತನಾಡಿ, ಕೇಂದ್ರ ಸರಕಾರದ ಪಿ.ಎಂ. ಸ್ವನಿಧಿ ಯೋಜನೆ ಅಡಿಯಲ್ಲಿ ಬೀದಿಬದಿ ವ್ಯಾಪಾರಿಗಳ ಸಬಲೀಕರಣಕ್ಕಾಗಿ ಸೆ.1ರಿಂದ 30ರವರೆಗೆ ಆಯೋಜಿಸಲಾಗುವ ಲೋಕ್ ಕಲ್ಯಾಣ್ ಮೇಳ ವಿಶೇಷ ಅಭಿಯಾನದ ಬಗ್ಗೆ ವ್ಯಾಪಕ ಪ್ರಚಾರ ಮೂಡಿಸುವುದರೊಂದಿಗೆ ಬೀದಿಬದಿ ವ್ಯಾಪಾರಿಗಳಿಗೆ ತಮ್ಮ ವ್ಯವಹಾರವನ್ನು ಅಭಿವೃದ್ಧಿ ಪಡಿಸಲು ಬ್ಯಾಂಕ್‌ಗಳಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲು ಬ್ಯಾಂಕ್‌ನ ಅಧಿಕಾರಿಗಳು ಮುಂದಾಗಬೇಕು ಎಂದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    04/09/2026

    ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಪಿ & ಓ ಹುದ್ದೆ: ಅರ್ಜಿ ಆಹ್ವಾನ

    03/09/2026

    ಉಡುಪಿ: ಕೈಗಾರಿಕೆ ಇಲಾಖೆಯಿಂದ ಪ.ಜಾತಿ/ ಪಂಗಡದ ಕೈಗಾರಿಕೋದ್ಯಮಿಗಳಿಗೆ ನೆರವು

    03/09/2026
    Leave A Reply Cancel Reply

    twelve − three =

    Call us

    Click Here

    Call us

    Call us

    Call us
    Highest Viewed Recently
    • ಸೈಂಟ್ ಥಾಮಸ್ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಉಡುಪಿ: ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ
    • ನರೇಂದ್ರ ಕುಮಾರ್ ಕೋಟ ಅವರಿಗೆ ಗುರುಭ್ಯೋ ಗುರುಭ್ಯೋ ನಮಃ ಶಿಕ್ಷಕ ಪುರಸ್ಕಾರ
    • ಸಂಸ್ಕೃತ ವಿಶ್ವದ ಜ್ಞಾನ ಮತ್ತು ವೈಭವದ ಭಾಷೆ: ಡಾ. ಜಯಶಂಕರ್ ಕಂಗಣ್ಣಾರು
    • ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.