Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮನುಷ್ಯ ಸತ್ವಗುಣದ ಸೃಷ್ಟಿ; ಅರಿವಿನ ಬದುಕು ಅಗತ್ಯ: ಶ್ರೀ ರಾಘವೇಶ್ವರ
    ಊರ್ಮನೆ ಸಮಾಚಾರ

    ಮನುಷ್ಯ ಸತ್ವಗುಣದ ಸೃಷ್ಟಿ; ಅರಿವಿನ ಬದುಕು ಅಗತ್ಯ: ಶ್ರೀ ರಾಘವೇಶ್ವರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗೋಕರ್ಣ:
    ಮನುಷ್ಯ ಸತ್ವಗುಣದ ಸೃಷ್ಟಿ, ಹುಲಿ ಭೇಟೆಯಾಡುವುದನ್ನು ಬಿಟ್ಟು ತಪ್ಪಸ್ಸನ್ನು ಮಾಡಿದರೆ ಅದು ವಿಚಿತ್ರ ಎನಿಸುತ್ತದೆ. ಹಾಗೆಯೇ ಮನುಷ್ಯನು ಪ್ರಾಣಿಗಳಂತೆ ಬದುಕಬಾರದು, ಗಿಡಮರಗಳಂತೆ ನಿತ್ಯ ಜಾಢ್ಯದಿಂದ ನಿದ್ರೆಯಲ್ಲೂ ಕಳೆಯಬಾರದು. ಮನುಷ್ಯ ಅರಿವು – ಆನಂದ – ದಯೆ – ಕರುಣೆಗಳಿಂದ ಕೂಡಿದ ಬದುಕನ್ನು ಬಾಳಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

    Click Here

    Call us

    Click Here

    ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಗುರುವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಆಹಾರದ ಚರಾಚರರೂಪಗಳ ಬಗ್ಗೆ ಪ್ರವಚನ ಅನುಗ್ರಹಿಸಿದ ಶ್ರೀಗಳು, ಆಹಾರ ಪ್ರಪಂಚವನ್ನು ಹತ್ತಾರು ಬಗೆಯಲ್ಲಿ ಎರಡು ಗುಂಪುಗಳಾಗಿ ವಿಂಗಡಿಸಬಹುದು.

    ಆಯುರ್ವೇದದ ಆಚಾರ್ಯರು ಆಹಾರವನ್ನು ಪ್ರಮುಖವಾಗಿ ಎರಡು ವಿಧವಾಗಿ ವಿಂಗಡಿಸಿ ಸ್ಥಾವರ ಹಾಗೂ ಜಂಗಮ ಎಂದು ಕರೆದಿದ್ದಾರೆ. ಸ್ಥಾವರ ವಿಭಾಗವನ್ನು ಸಸ್ಯಜನ್ಯ ಹಾಗೂ ಜಂಗಮ ವಿಭಾಗವನ್ನು ಪ್ರಾಣಿಜನ್ಯ ಎನ್ನಬಹುದಾಗಿದೆ. ಸ್ಥಾವರವನ್ನು ಮತ್ತೆ ನಾಲ್ಕು ಬಗೆಯಲ್ಲಿ ವಿಭಾಗಿಸಿದ್ದು, ಹೂವಿಲ್ಲದೇ ಹಣ್ಣು ಬಿಡುವ ವನಸ್ಪತಿಗಳು, ಹೂವು ಬಿಟ್ಟು ಬಳಿಕ ಹಣ್ಣು ಬಿಡುವ ವೃಕ್ಷಗಳು, ಬಳ್ಳಿಗಳು, ಫಲವನ್ನು ಬಿಟ್ಟನಂತರ ತಾವಾಗಿಯೇ ಒಣಗುವ ಧಾನ್ಯಾದಿ ಗಿಡಗಳನ್ನು ಓಷಧಿಗಳು ಎಂದು ಕರೆಯಲಾಗಿದೆ. ಜಂಗಮದಲ್ಲಿಯೂ ನಾಲ್ಕು ಬಗೆಗಳಿದ್ದು, ಜರಾಯುಜ, ಅಂಡಜ, ಸ್ವೇದಜ, ಉದ್ಭಿಜ ಎಂದು ವಿಭಜಿಸಲಾಗಿದೆ ಎಂದು ಆಹಾರದ ವಿಧಗಳನ್ನು ವಿವರಿಸಿದರು.

    ದೇವರ ಸೃಷ್ಟಿಯಲ್ಲಿ ಪ್ರಾಣಿಗಳು ರಾಜಸ ಸೃಷ್ಟಿಯಾದರೆ, ಗಿಡ, ಮರ, ಜಡವಸ್ತುಗಳು ತಾಮಸ ಸೃಷ್ಟಿ ಹಾಗೂ ತಲೆಯನ್ನು ಎತ್ತರದ ಸ್ಥಾನದಲ್ಲಿ ಹೊಂದಿರುವ, ಜ್ಞಾನವೇ ಪ್ರಧಾನವಾದ ಮನುಷ್ಯ ದೇವರ ಸಾತ್ವಿಕ ಸೃಷ್ಟಿ ಎಂದ ಶ್ರೀಗಳು, ಸಾತ್ವಿಕ ಸೃಷ್ಟಿಯಾದ ಮನುಷ್ಯನಿಗೆ ರಾಜಸ ಸೃಷ್ಟಿ ಹಾಗೂ ತಾಮಸ ಸೃಷ್ಟಿಗಳು ಆಹಾರವಾಗಿವೆ. ಅಂದರೆ ಸಸ್ಯಜನ್ಯ ಹಾಗೂ ಪ್ರಾಣಿಜನ್ಯಗಳು ಮನುಷ್ಯನ ಆಹಾರಗಳಾಗಿವೆ ಎಂದು ತಿಳಿಸಿದರು.

     ಆಹಾರವು ಸಿಹಿ- ಕಹಿಗಳೆಂಬ ಆರು ರಸಗಳಲ್ಲಿ ನೆಲಸಿದ್ದು, ಆ ರಸಗಳು ಪದಾರ್ಥಗಳಲ್ಲಿವೆ. ಸಾತ್ವಿಕಾಹಾರವನ್ನು ಸ್ವೀಕರಿಸಬೇಕೆಂಬ ಹಿನ್ನೆಲೆಯಲ್ಲಿ ಸಾತ್ವಿಕ ಸೃಷ್ಟಿಯ ಮನುಷ್ಯನನ್ನೇ ಮನುಷ್ಯ ತಿನ್ನಲು ಸಾಧ್ಯವಿಲ್ಲ. ಮನುಷ್ಯನು ಸಾತ್ವಿಕ ಸೃಷ್ಟಿಯೇ ಆದರೂ, ಮನುಷ್ಯನನ್ನೇ ತಿನ್ನಲು ಹೊರಟರೆ ಅದು ತಾಮಸಾಹಾರವಾಗುತ್ತದೆ. ಕತ್ತಲಲ್ಲಿ ಬೆಳಕನ್ನು ಹುಡುಕು ಎಂಬಂತೆ ರಾಜಸ, ತಾಮಸ ಆಹಾರ ವಿಭಾಗಗಳ ಮಧ್ಯದಲ್ಲಿ ಸಾತ್ವಿಕ ಆಹಾರವನ್ನು ಹುಡುಕಿ ಸ್ವೀಕರಿಸಬೇಕು ಎಂದು ಅಭಿಪ್ರಾಯಪಟ್ಟರು.

    Click here

    Click here

    Click here

    Call us

    Call us

    ಉಪ್ಪಿನಂಗಡಿ ಹವ್ಯಕ ಮಂಡಲದ ಬೆಟ್ಟಂಪಾಡಿ, ಪುತ್ತೂರು, ದರ್ಬೆ, ಪಂಜ, ಬೆಳ್ಳಾರೆ, ಚೊಕ್ಕಾಡಿ ಹವ್ಯಕ ವಲಯಗಳ ಪರವಾಗಿ ಎ.ಪಿ. ಸದಾಶಿವ ಮರಿಕೆ ಕುಟುಂಬದವರು ಗುರುಭಿಕ್ಷಾಸೇವೆ ಸಮರ್ಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಉದಯ ನಾಯ್ಕ, ಹರಿಪ್ರಸಾದ್ ಪೆರಿಯಾಪು, ಆರ್.ಎಸ್. ಹೆಗಡೆ ಹರಗಿ, ಈಶ್ವರೀ ಬೇರ್ಕಡವು, ಅರವಿಂದ ದರ್ಬೆ, ಪ್ರಸನ್ನಕುಮಾರ್ ಟಿ.ಜಿ, ದಿನಪ್ರಧಾನರಾಗಿ ದೇವೇಂದ್ರ ಖಂಡಿಕಾ ದಂಪತಿಗಳು ಉಪಸ್ಥಿತರಿದ್ದು, ಆಶೀರ್ವಾದ ಪಡೆದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ಮತ್ತು ಆರೋಗ್ಯ ಕಾರ್ಯಕ್ರಮ

    04/09/2026

    ಸೈಂಟ್ ಥಾಮಸ್ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    04/09/2026

    ನರೇಂದ್ರ ಕುಮಾರ್ ಕೋಟ ಅವರಿಗೆ ಗುರುಭ್ಯೋ ಗುರುಭ್ಯೋ ನಮಃ ಶಿಕ್ಷಕ ಪುರಸ್ಕಾರ

    04/09/2026
    Leave A Reply Cancel Reply

    nineteen − two =

    Call us

    Click Here

    Call us

    Call us

    Call us
    Highest Viewed Recently
    • ಮನುಷ್ಯ ಸತ್ವಗುಣದ ಸೃಷ್ಟಿ; ಅರಿವಿನ ಬದುಕು ಅಗತ್ಯ: ಶ್ರೀ ರಾಘವೇಶ್ವರ
    • ಕುಂದಾಪುರ: ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ಮತ್ತು ಆರೋಗ್ಯ ಕಾರ್ಯಕ್ರಮ
    • ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ
    • ಸೈಂಟ್ ಥಾಮಸ್ ಶಾಲೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಉಡುಪಿ: ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.