ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ತೆಕ್ಕಟ್ಟೆಯ ವಿಶ್ವವಿನಾಯಕ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿ.ಯು ಕಾಲೇಜಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಸ್ಪರ್ಧೆಗಳು ನಡೆಯಿತು.

ಶಾಲಾ ಪ್ರಾಂಶುಪಾಲರಾದ ಸಂದೀಪ್ ಪುತ್ರನ್, ಶಾಲಾ ಆಡಳಿತ ನಿರ್ದೇಶಕರಾದ ಹರೀಶ್ ಮರವಂತೆ ಪೂರ್ವ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಶ್ರೀ ಕೃಷ್ಣ, ರಾಧೆಯ ವೇಷಭೂಷಣ ಧರಿಸಿ ನೃತ್ಯ ಮಾಡುವುದರ ಮೂಲಕ ಎಲ್ಲರ ಗಮನ ಸೆಳೆದರು.
ಪುಟ್ಟ ಮಕ್ಕಳು ಕೃಷ್ಣನ ಬಾಲಲೀಲೆಗಳನ್ನು ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು. ಹಾಗೆಯೇ ಪ್ರಾಥಮಿಕ, ಪ್ರೌಢ, ಪಿ.ಯು ಕಾಲೇಜಿನ ವಿದ್ಯಾರ್ಥಿಗಳಿಗೆ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಹಾಗೂ ಹಗ್ಗ ಜಗ್ಗಾಟ ಸರ್ಧೆಯನ್ನು ಆಯೋಜಿಸಲಾಗಿತ್ತು. ಎಲ್ಲಾ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ನೀಡಿ ಅಭಿನಂದಿಸಲಾಯಿತು.
ಕಾರ್ಯಕ್ರಮವು ವಿದ್ಯಾರ್ಥಿಗಳ ಹಾಗೂ ಶಿಕ್ಟಕರ ಉತ್ಸಾಹಭರಿತ ಭಾಗವಹಿಸುವಿಕೆಯಿಂದ ಯಶಸ್ವಿಯಾಗಿ ನೆರವೇರಿತು.
















