ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಅನಿವಾಸಿ ಕನ್ನಡಗರಿಗೆ ಪ್ರತ್ಯೇಕ ಸಚಿವಾಲಯದ ಭರವಸೆ ರಾಜ್ಯ ಸರಕಾರ ವಿಧಾನಸಭೆಯಲ್ಲಿ ಮಂಡಿಸಿದೆ ಅದರಂತೆ ಮುಂದಿನ ಕಾರ್ಯತಂತ್ರದ ಕುರಿತು ಮುಂದಿನದಿನಗಳಲ್ಲಿ ರಾಜ್ಯ ಸರಕಾರದೊಂದಿಗೆ ಚರ್ಚಿಸುತ್ತೇನೆ ಎಂದು ಅನಿವಾಸಿ ಭಾರತೀಯ ಸಮಿತಿ ಕರ್ನಾಟ ಹಾಗೂ ವಿಧಾನಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣ ಹೇಳಿದರು.

ಅವರು ಶುಕ್ರವಾರ ಇಲ್ಲಿನ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ರಾಜ್ಯ ಸರಕಾರ ಸುಭದ್ರವಾಗಿ ಜನಸ್ನೇಹಿ ಆಡಳಿತವನ್ನು ನೀಡುತ್ತಿದೆ ಎಂದರಲ್ಲದೆ ಉಡುಪಿ ಜಿಲ್ಲೆ ಕೊಲ್ಲೂರು ಸೇರಿದಂತೆ ವಿವಿಧ ದೇಗುಲವನ್ನು ಸಂದರ್ಶಿಸಿದ್ದೇನೆ ಅದೇ ಇಲ್ಲಿನ ಕಾಂಗ್ರೆಸ್ ಮುಖಂಡರೊಡನೆ ಅಮೃತೇಶ್ವರಿ ದೇಗುಲಕ್ಕೆ ಭೇಟಿ ನೀಡಿದ್ದೇನೆ ದೇಗುಲದಲ್ಲಿ ಮುಂದಿನ ದಿನಗಳಲ್ಲಿ ವಿಶೇಷ ಸೇವೆಯನ್ನು ನೀಡಲಿದ್ದೇನೆ ಎಂದರು.
ದೇಗುಲ ಅಭಿವೃದ್ಧಿ ಸರಕಾರದೊಂದಿಗೆ ಚರ್ಚೆ:
ಇಲ್ಲಿನ ಅಮೃತೇಶ್ವರೀ ದೇಗುಲದ ಅಭಿವೃದ್ಧಿಯ ಕುರಿತಂತೆ ಧಾರ್ಮಿಕ ದತ್ತಿ ಇಲಾಖಾ ಸಚಿವರಾದ ರಾಮಲಿಂಗ ರೆಡ್ಡಿಯವರೊಂದಿಗೆ ಚರ್ಚಿಸಿ ಇಲ್ಲಿನ ಸಭಾಭವನ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗೆ ಸರಕಾರ ಕೈಜೋಡಿಸಲಿದೆ ಎಂದು ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ರವರಿಗೆ ಭರವಸೆ ನೀಡಿದರು.
ಈ ವೇಳೆ ಡಾ.ಆರತಿ ಕೃಷ್ಣ ಇವರನ್ನು ದೇಗುಲದ ಅಧ್ಯಕ್ಷ ವತಿಯಿಂದ ಶಾಲು ಹೋದಿಸಿ ಗೌರವಿಸಿ ಪ್ರಸಾದ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ತಿಮ್ಮ ಪೂಜಾರಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಅಜಿತ್ ಶೆಟ್ಟಿ ಯಾಳಹಕ್ಲು, ಸೌಜನ್ ಕುಮಾರ್ ಸಾಲಿಗ್ರಾಮ, ಜಯರಾಮ ಶೆಟ್ಟಿ, ಯುವ ಕಾಂಗ್ರೆಸ್ ನ ರಂಜೀತ್ ಬಾರಿಕೆರೆ, ದೇವೇಂದ್ರ ಗಾಣಿಗ, ಗಣೇಶ್ ಪೂಜಾರಿ, ದೇವದಾಸ್ ಕಾಂಚನ್, ಗೋಪಾಲ್ ಬಂಗೇರ, ರಮೇಶ್ ಮೆಂಡನ್, ದೇಗುಲದ ಟ್ರಸ್ಟಿಗಳಾದ ಸುಭಾಶ್ ಶೆಟ್ಟಿ ಗಿಳಿಯಾರು, ಚಂದ್ರ ಆಚಾರ್, ಶಿವ ಪೂಜಾರಿ, ರತನ್ ಐತಾಳ್, ಗಣೇಶ್ ನೆಲ್ಲಿಬೆಟ್ಟು, ಸುಬ್ರಾಯ ಜೋಗಿ, ಸುಧಾ ಪೂಜಾರಿ, ಜ್ಯೋತಿ ಡಿ. ಕಾಂಚನ್, ಅರ್ಚಕರಾದ ದಾಮೋದರ ಜೋಗಿ, ಸಂದೇಶ್ ಜೋಗಿ ಅನೇಕರು ಇದ್ದರು.
ಕೋಟದ ಅಮೃತೇಶ್ವರೀ ದೇಗುಲದ ವಿಧಾನಪರಿಷತ್ ಸದಸ್ಯೆ ಡಾ. ಆರತಿ ಕೃಷ್ಣ ಭೇಟಿ ನೀಡಿದರು.
















