Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಾಯಿಯಂತೆ ಪ್ರಕೃತಿಯೂ ಹಿತವಲ್ಲದ ಆಹಾರವನ್ನು ದೂರವಿಡುತ್ತದೆ: ಶ್ರೀ ರಾಘವೇಶ್ವರ
    ಊರ್ಮನೆ ಸಮಾಚಾರ

    ತಾಯಿಯಂತೆ ಪ್ರಕೃತಿಯೂ ಹಿತವಲ್ಲದ ಆಹಾರವನ್ನು ದೂರವಿಡುತ್ತದೆ: ಶ್ರೀ ರಾಘವೇಶ್ವರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗೋಕರ್ಣ:
    ಮಗುವಿಗೆ ಹಿತವಲ್ಲದ ಆಹಾರವನ್ನು ತಾಯಿ ಅಡುಗೇ ಮನೆಯಲ್ಲಿ ಕಾಣದಂತೆ ಅಡಗಿಸಿಡುವಂತೆ, ಪ್ರಕೃತಿಯು ಜೀವಿಗೆ ಹಿತವಲ್ಲದ ಆಹಾರಗಳನ್ನು ನಮ್ಮಿಂದ ಆದಷ್ಟು ದೂರವಿಟ್ಟಿರುತ್ತದೆ. ನಮಗೆ ಹಿತವಾದದ್ದು ರಮಣೀಯವಾದರೆ, ಪ್ರಿಯ ಆಹಾರವನ್ನು ಮರಣೀಯ ಎನ್ನಬಹುದಾಗಿದೆ. ಹಾಗಾಗಿ ಪ್ರಿಯ ಹಾಗೂ ಹಿತ ಆಹಾರಗಳ ವ್ಯತ್ಯಾಸವನ್ನು ಗಮನಿಸಿ ಸ್ವೀಕರಿಸಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

    Click Here

    Call us

    Click Here

    ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಶುಕ್ರವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಔಷಧದ ಅಂಗಡಿಯಲ್ಲಿ ಅನೇಕ ಔಷಧಗಳಿರುತ್ತವೆ. ಆದರೆ ಎಲ್ಲವೂ ನಾವು ಸೇವಿಸಲು ಇರುವುದಲ್ಲ. ಹಾಗೆಯೇ ಸೃಷ್ಟಿಯಲ್ಲಿ ಅನೇಕ ಬಗೆಯ ಆಹಾರವಿದೆ. ಆದರೆ ಎಲ್ಲವೂ ನಮಗೆ ಸೂಕ್ತವಲ್ಲ. ನಮಗೆ ಸೂಕ್ತವಾದ ಆಹಾರವನ್ನು ಆಯುರ್ವೇದದಲ್ಲಿ ಹಿತಾಹಾರ ಎನ್ನಲಾಗಿದ್ದು, ಪ್ರಕೃತಿ ನಮಗಾಗಿ ಕೊಟ್ಟಿರುವುದನ್ನು ನಿಹಿತ ಎಂದರೆ, ಶಾಸ್ತ್ರಗಳು ಸೂಚಿಸಿರುವುದನ್ನು ವಿಹಿತ ಎಂದು ಕರೆಯಲಾಗಿದೆ ಎಂದು ಹಿತ – ಅಹಿತ ಆಹಾರಗಳ ಕುರಿತಾಗಿ ವಿವರಿಸಿದರು.

     ಸಿಕ್ಕಿದ್ದನ್ನು ಸಿಕ್ಕಂತೆ ತಿನ್ನುವುದು ಮನುಷ್ಯನ ಸ್ವಭಾವವಲ್ಲ. ಸೂಕ್ತವಾದ ಬೇರೆಬೇರೆ ಪದಾರ್ಥಗಳನ್ನು ಸೇರಿಸಿ, ಪದಾರ್ಥಗಳಲ್ಲಿನ ದೋಷಗಳನ್ನು ತೆಗೆದು, ಹಿತವಾದ ಪಾಕವನ್ನು ಮಾಡಿ ಸೇವಿಸುವುದು ಮನುಷ್ಯನ ಪ್ರವೃತ್ತಿಯಾಗಿದೆ. ಪ್ರಕೃತಿಯನ್ನು ಮಾರ್ಪಡಿಸಿಕೊಳ್ಳುವ ವಿಶೇಷ ಅವಕಾಶವನ್ನು ನಮಗೆ ದೇವರು ಕೊಟ್ಟಿದ್ದಾನೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕಾದ ಕರ್ತವ್ಯ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.

    ಕೆಲವು ಪದಾರ್ಥಗಳನ್ನು ಆಯುರ್ವೇದವು ಶ್ರೇಷ್ಠ ಪಥ್ಯಗಳಲ್ಲಿ ಶ್ರೇಷ್ಠ ಎಂದು ಸೂಚಿಸಿದೆ. ಆದರೆ ಹಾಗೆ ಸೂಚಿಸಿದ ಹಲವಾರು ಪದಾರ್ಥಗಳು ಇಂದು ಕಲಿಯ ಪ್ರಭಾವಕ್ಕೆ ಒಳಗಾಗಿ ಸೇವಿಸಲು ಯೋಗ್ಯವೇ? ಎಂದು ಪ್ರಶ್ನಿಸಿಕೊಳ್ಳುವಂತಾಗಿದೆ. ಉದಾಹರಣೆಗೆ ಹಾಲು, ದ್ರಾಕ್ಷಿ ಹಣ್ಣು, ಸಕ್ಕರೆ ಇತ್ಯಾದಿಗಳು ಹೆಚ್ಚಿನವು ಕಲುಷಿತವಾಗಿವೆ. ಕಲುಷಿತವಾಗದೇ ಇರುವುದನ್ನು ಪರಿಶ್ರಮದಿಂದ ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. 

     ಪ್ರಾಚೀನ ಆಯುರ್ವೇದ, ಯೋಗಶಾಸ್ತ್ರ ಸೂಚಿಸಿದಂತೆ ಆಹಾರದ ವಿಚಾರದಲ್ಲಿ ಸರಿತಪ್ಪುಗಳನ್ನು ಸಮಾಜದ ಮುಂದೆ ತೆರೆದಿಡುವ ಕಾರ್ಯವನ್ನು ಮಾಡುತ್ತಿದ್ದೇವೆ. ಹಲವರು ಆಸಕ್ತಿಯಿಂದ ಪ್ರತಿದಿನವೂ ಪ್ರವಚನವನ್ನು ಕೇಳುತ್ತಿದ್ದರೆ, ಕೆಲವರು ಆಚರಣೆಗೆ ತಂದುಕೊಳ್ಳುತ್ತಿದ್ದಾರೆ. ನಮ್ಮ ಬಗ್ಗೆ ಕೆಲವರು ಹಗುರವಾದ ಮಾತುಗಳನ್ನು ಆಡಿಕೊಳ್ಳಬಹುದು. ಆದರೆ ಸರಿದಾರಿಯನ್ನು ತೋರಿಸಬೇಕಾದ ಕರ್ತವ್ಯವನ್ನು ನಾವು ಮಾಡುತ್ತಿದ್ದೇವೆ ಎಂದು ‘ಅನ್ನಂ ಬ್ರಹ್ಮ’ ಪ್ರವಚನ ಮಾಲಿಕೆಯ ಅಗತ್ಯತೆಯ ಕುರಿತಾಗಿ ಹೇಳಿದರು.   

    Click here

    Click here

    Click here

    Call us

    Call us

    ನಿವೃತ್ತ ಪೋಲಿಸ್ ಅಧಿಕಾರಿಗಳು ಹಾಗೂ ಶ್ರೀಮಠದ ಮಾಜಿ ಸಿ.ಇ.ಓ ಕೆ.ಜಿ. ಭಟ್, ಈಶ್ವರೀ ಬೇರ್ಕಡವು, ವಾದಿರಾಜ ಸಾಮಗ, ಮಂಜುನಾಥ ಭಟ್, ಚಂಪಕಾ ಭಟ್, ಸ್ವಾತಿ ಭಾಗ್ವತ್, ವೇಣು ನವಿಲಗೋಣ, ಸದಾನಂದ ಹೆಬ್ಬಾರ್, ದಿನಪ್ರಧಾನರಾಗಿ  ರಾಧಾಕೃಷ್ಣ ಬಂದಗದ್ದೆ ದಂಪತಿಗಳು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಕ್ತದಾನವು ಕೇವಲ ಸಾಮಾಜಿಕ ಸೇವೆಯಲ್ಲ. ಜೀವವೊಂದನ್ನು ಉಳಿಸುವ ಮಹತ್ವದ ಕಾರ್ಯ: ಜಯಕ‌ರ್ ಶೆಟ್ಟಿ

    05/09/2026

    ಕುಂದಾಪುರ: ಅಶೋಕ್‌ ತೆಕ್ಕಟ್ಟೆ ಅವರಿಗೆ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ

    05/09/2026

    ರೋಟರಿ ಕ್ಲಬ್ ಕೋಟ ಬ್ರಿಗೇಡ್: ಸದಸ್ಯತ್ವ ಅಭಿವೃದ್ಧಿ ಮತ್ತು ಪಬ್ಲಿಕ್ ಇಮೇಜ್‌ ಝೋನಲ್ ಸೆಮಿನಾರ್

    05/09/2026
    Leave A Reply Cancel Reply

    two × 1 =

    Call us

    Click Here

    Call us

    Call us

    Call us
    Highest Viewed Recently
    • ತಾಯಿಯಂತೆ ಪ್ರಕೃತಿಯೂ ಹಿತವಲ್ಲದ ಆಹಾರವನ್ನು ದೂರವಿಡುತ್ತದೆ: ಶ್ರೀ ರಾಘವೇಶ್ವರ
    • ರಕ್ತದಾನವು ಕೇವಲ ಸಾಮಾಜಿಕ ಸೇವೆಯಲ್ಲ. ಜೀವವೊಂದನ್ನು ಉಳಿಸುವ ಮಹತ್ವದ ಕಾರ್ಯ: ಜಯಕ‌ರ್ ಶೆಟ್ಟಿ
    • ಕುಂದಾಪುರ: ಅಶೋಕ್‌ ತೆಕ್ಕಟ್ಟೆ ಅವರಿಗೆ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ
    • ರೋಟರಿ ಕ್ಲಬ್ ಕೋಟ ಬ್ರಿಗೇಡ್: ಸದಸ್ಯತ್ವ ಅಭಿವೃದ್ಧಿ ಮತ್ತು ಪಬ್ಲಿಕ್ ಇಮೇಜ್‌ ಝೋನಲ್ ಸೆಮಿನಾರ್
    • ವಂದೇ ಮಾತರಂ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ: ಕೆ. ವಿಕಾಸ್ ಹೆಗ್ಡೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.