ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಆದರ್ಶ ಆಸ್ಪತ್ರೆ ಉಡುಪಿ ಮತ್ತು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾI ಎಸ್. ರಾಧಾಕೃಷ್ಣನ್‌ರ ಜನ್ಮ ಜಯಂತಿಯ ಅಂಗವಾಗಿ ನೀಡುವ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಸಂತ್ ಕುಮಾರ್ ಅವರು ಭಾಜನರಾಗಿದ್ದಾರೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.











