ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಜಿಲ್ಲೆ 3182ರಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಅತ್ಯುತ್ತಮ ತಂಡಗಳಲ್ಲಿ ಒಂದಾಗಿ ಮೂಡಿಬಂದಿದ್ದು, ಉತ್ತಮ ಕ್ಲಬ್ ಪ್ರಶಸ್ತಿ ಸಹಿತ ಒಟ್ಟು 23 ಪ್ರಶಸ್ತಿಗಳನ್ನು ತನ್ನ ಬಗಲಿಗೆ ಹಾಕಿಕೊಂಡಿದೆ.

ಹಾಸನದಲ್ಲಿ ನಡೆದ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3182ರ ಜಿಲ್ಲಾ ಸಮ್ಮೇಳನದಲ್ಲಿ 2025-26ನೇ ಸಾಲಿನ ಜಿಲ್ಲಾ ಗವರ್ನರ್ ಕೆ.ಪಾಲಾಕ್ಷ, ಅಸಿಸ್ಟೆಂಟ್ ಗವರ್ನರ್ ಐ. ನಾರಾಯಣ ಅವರು 2025-26ನೇ ಸಾಲಿನ ಗಂಗೊಳ್ಳಿ ರೋಟರಿ ಅಧ್ಯಕ್ಷ ಕೃಷ್ಣ ಪೂಜಾರಿ ಅವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.
2026-27ನೇ ಸಾಲಿನ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಮಾಲಾಶ್ರೀ ಖಾರ್ವಿ, ಮಾಜಿ ಅಧ್ಯಕ್ಷರಾದ ಜನಾರ್ದನ ಪೂಜಾರಿ ಪೆರಾಜೆ ಮತ್ತು ಎಂ. ನಾಗೇಂದ್ರ ಪೈ, ರೋಟರಿ ಜಿಲ್ಲೆ 3182ರ ಪದಾಧಿಕಾರಿ, ವಿವಿಧ ವಲಯಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಲಯ-1ರ ಸಣ್ಣ ಕ್ಲಬ್ ವರ್ಗದಲ್ಲಿ ಸಮುದಾಯ ಸೇವೆ, ಸಹಭಾಗಿತ್ವ, ನೀರು, ನೈರ್ಮಲ್ಯ ಮತ್ತು ಸ್ವಚ್ಛತೆ, ತಾಯಿ ಮತ್ತು ಮಕ್ಕಳ ಆರೋಗ್ಯ, ಶಿಕ್ಷಣ, ರಸ್ತೆ ಸುರಕ್ಷತೆ, ಯುವಜನ ಕಲ್ಯಾಣ, ಪರಿಸರ ಮತ್ತಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆಗಾಗಿ ಪ್ರಶಸ್ತಿ ದೊರೆತಿದೆ.
















