Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್‌ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಡಾ. ಹರೇಕಳ ಹಾಜಬ್ಬ ಭಾಗಿ
    ಊರ್ಮನೆ ಸಮಾಚಾರ

    ಕ್ರಿಯೇಟಿವ್‌ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಡಾ. ಹರೇಕಳ ಹಾಜಬ್ಬ ಭಾಗಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
     ತಾಲೂಕಿನ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಕ್ರಿಯೇಟಿವ್ ಗುರುದೇವೋಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಮುಖ್ಯ ಅತಿಥಿಯಾಗಿ ಅಕ್ಷರ ಸಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಹರೇಕಳ ಹಾಜಬ್ಬ ಅವರು ಭಾಗವಹಿಸಿದ್ದರು. ಕಡುಬಡತನದಲ್ಲಿ ಹುಟ್ಟಿ ತಾನು ಅಕ್ಷರವನ್ನು ಕಲಿಯದಿದ್ದರೂ ತನ್ನೂರಿನ ಮಕ್ಕಳು ಅದರಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ತನ್ನೂರಿನಲ್ಲಿ ಒಂದು ಶಾಲೆಯನ್ನು ತೆರೆದು ಇಡೀ ರಾಷ್ಟ್ರಕ್ಕೆ ಮಾದರಿಯಾದ ಹರೇಕಳ ಹಾಜಬ್ಬರವರನ್ನು ಗುರುದೇವೋಭವ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ತಾನು ಆ ಸಂದರ್ಭದಲ್ಲಿ ಎದುರಿಸಿದ ಕಷ್ಟಗಳು ಹಾಗೂ ತನ್ನೂರಿನ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಪಡುತ್ತಿದ್ದ ಕಷ್ಟವನ್ನು ನೋಡಲಾರದೆ ನಾನು ವಿದ್ಯಾ ಸಂಸ್ಥೆಯನ್ನು ತೆರೆದಿರುವುದಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ತನಗೆ ಸಹಾಯ ಹಸ್ತವನ್ನು ಚಾಚಿದ ಎಲ್ಲರನ್ನು ಸ್ಮರಿಸಿಕೊಂಡರು. ಹಾಗೂ ಇಂದು ಇಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಿಂದ ಗೌರವಿಸಲ್ಪಡುತ್ತಿರುವುದು ನನ್ನ ಸೌಭಾಗ್ಯವೆಂದು ತಿಳಿಸಿದರು.

    ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಸ್ವಾಗತಿಸಿದ ಕ್ರಿಯೇಟಿವ್ ಸಂಸ್ಥೆಯ ಸಹಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು ಶಿಕ್ಷಣಕ್ಕಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ಹರೇಕಳ ಹಾಜಬ್ಬರವರನ್ನು ಶಿಕ್ಷಕರ ದಿನಾಚರಣೆ ಈ ಸುಸಂದರ್ಭದಲ್ಲಿ ಗೌರವಿಸುತ್ತಿರುವುದು ಅತ್ಯಂತ ಸಂತೋಷದ ವಿಷಯ. ಗುರು ಎಂಬುದು ಕೇವಲ ವಿದ್ಯೆ ಕಲಿಸಿದ ಶಿಕ್ಷಕ ಮಾತ್ರವಲ್ಲ, ಜೀವನಕ್ಕೆ ಸನ್ಮಾರ್ಗವನ್ನು ತೋರಿ ಕೈ ಹಿಡಿದು ನಡೆಸಿದ ಪ್ರತಿಯೊಬ್ಬ ವ್ಯಕ್ತಿಯು ಗುರು ಸ್ಥಾನದಲ್ಲಿ ನಿಲ್ಲಲು ಅರ್ಹ ಎಂದು ಪ್ರಾಸ್ತಾವಿಕ ನುಡಿಗಳನ್ನಾಡಿದರು.

    ಈ ಸಂದರ್ಭದಲ್ಲಿ ಅಕ್ಷರ ಸಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಕ್ರಿಯೇಟಿವ್ ಗುರುದೇವೋಭವ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.ಸಂಸ್ಥೆಯಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಉಪನ್ಯಾಸಕರುಗಳಾದ ವಿಶ್ವನಾಥ ಮಠ (ರಸಾಯನಶಾಸ್ತ್ರ), ಅಭಿಷೇಕ್ ಕುಮಾರ್ (ಭೌತಶಾಸ್ತ್ರ), ಶರತ್ ರೈ (ಭೌತಶಾಸ್ತ್ರ), ಆಶಾ ಕೆ.ಎಲ್. (ಜೀವಶಾಸ್ತ್ರ) ಇವರುಗಳಿಗೆ ಕ್ರಿಯೇಟಿವ್ ಗುರುದೇವೋಭವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಸಂಸ್ಥೆಯ ಎಲ್ಲ ಉಪನ್ಯಾಸಕ ವರ್ಗದವರಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಸಹ ಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು, ಹಾಜಬ್ಬ ರವರ ಸಾಧನೆ ಅವರ ಶಿಕ್ಷಣ ಕ್ಷೇತ್ರದ ಬಗೆಗಿನ ಒಲವು ಇಡೀ ರಾಷ್ಟ್ರ ಮೆಚ್ಚುವಂಥದ್ದು. ಬದುಕಿನ ಮಾರ್ಗ ತೋರಿಸಿದ ದಾರ್ಶನಿಕನಿಗೆ ಸನ್ಮಾನಿಸಿರುವುದು ಈ ಕಾರ್ಯಕ್ರಮಕ್ಕೆ ಅತ್ಯಂತ ಮೆರುಗನ್ನು ತಂದಿದೆ ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಸಂಸ್ಥೆಯ ಸಹಸಂಸ್ಥಾಪಕರುಗಳಾದ ಡಾ. ಗಣನಾಥ ಬಿ.ಶೆಟ್ಟಿ, ಆದರ್ಶ ಎಂ. ಕೆ., ವಿಮಲ್ ರಾಜ್, ಗಣಪತಿ ಭಟ್ ಕೆ.ಎಸ್. ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ ಅಮ್ಮ ಚಾರಿಟೇಬಲ್ ಟ್ರಸ್ಟ್ ಗೆ ಕ್ರಿಯೇಟಿವ್ ಸಂಸ್ಥೆಯ ವತಿಯಿಂದ ಒಂದು ಲಕ್ಷ ರೂಪಾಯಿಯ ಸಹಾಯಧನವನ್ನು ನೀಡಲಾಯಿತು. ಕಾರ್ಯಕ್ರಮವನ್ನು ಜೀವಶಾಸ್ತ್ರ ಉಪನ್ಯಾಸಕರಾದ ಲೋಹಿತ್ ಕೆ. ನಡೆಸಿಕೊಟ್ಟರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ರಾಮ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ವಾರ್ಷಿಕ ಮಹಾಸಭೆ

    07/09/2026

    ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ: 40ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ

    07/09/2026

    ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆ

    07/09/2026
    Leave A Reply Cancel Reply

    twelve − 10 =

    Call us

    Click Here

    Call us

    Call us

    Call us
    Highest Viewed Recently
    • ಶ್ರೀ ರಾಮ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ವಾರ್ಷಿಕ ಮಹಾಸಭೆ
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ: 40ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ
    • ತೆಕ್ಕಟ್ಟೆ ವಿಶ್ವ ವಿನಾಯಕ ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆ
    • ಸಮಾಜಕ್ಕೆ ಸಂಪನ್ಮೂಲಗಳನ್ನು ಧಾರೆ ಎರೆದ ಸಂಪತ್ ಕುಮಾರ್ ಕಾರ್ಯ ಶ್ಲಾಘನೀಯ: ಕೋಟ ಶ್ರೀನಿವಾಸ ಪೂಜಾರಿ
    • ಕ್ರಿಯೇಟಿವ್‌ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಡಾ. ಹರೇಕಳ ಹಾಜಬ್ಬ ಭಾಗಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.