ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಸಂಘ ರತ್ನ ಹಾಗೂ ಭಾರತ ಸಂಘ ಸಿರಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಇವರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ನಡೆಸಲಾಯಿತು. ಕುಂದಾಪುರದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ಶಿಕ್ಷಕರಾದ ರವಿಶಂಕರ್ ಹೆಬ್ಬಾರ್ ಅವರನ್ನು ಸ್ವಗೃಹದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷರಾದ ಶೀನ ಖಾರ್ವಿ, ಸಂಚಾಲಕರಾದ ಸುಕುಮಾರ್ ನಾಯ್ಕ್ , ಅಧ್ಯಕ್ಷರಾದ ಗಣೇಶ್ ನಾಯ್ಕ್, ಪ್ರಧಾನ ಕಾರ್ಯದರ್ಶಿ ಚೇತನ್ ದೇವಾಡಿಗ ಕೋಶಾಧಿಕಾರಿ ಶರತ್ ಎಸ್. ಖಾರ್ವಿ, ಸಂಘಟನಾ ಕಾರ್ಯದರ್ಶಿ ಕೆ. ಮನೋಹರ್ ಪುತ್ರನ್, ಸಾಂಸ್ಕೃತಿಕ ಕಾರ್ಯದರ್ಶಿ ಶೇಖರ್ ಎಸ್. ಖಾರ್ವಿ, ಸದಸ್ಯರಾದ ಅಮೋಘ ನಾಯ್ಕ್ ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ಶಶಿಕಾಂತ್ ಎಸ್. ಖಾರ್ವಿ ನಿರೂಪಿಸಿ, ವಂದಿಸಿದರು.











