Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ಲಾಸ್ಟಿಕ್‌ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ: ಶ್ರೀ ರಾಘವೇಶ್ವರ
    ಊರ್ಮನೆ ಸಮಾಚಾರ

    ಪ್ಲಾಸ್ಟಿಕ್‌ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ: ಶ್ರೀ ರಾಘವೇಶ್ವರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ  ಡಾಟ್‌ ಕಾಂ ಸುದ್ದಿ.
    ಗೋಕರ್ಣ:
    ನೀರು ಎಂಬುದು ಪ್ರಾಣಿಗಳ ಪ್ರಾಣವೇ ಆಗಿದೆ. ಸಂಸ್ಕೃತದಲ್ಲಿ ನೀರಿಗೆ ಜೀವನ ಎಂಬುದೇ ಪರ್ಯಾಯ ಪದವಾಗಿದೆ. ಇದು ನೀರಿಗಿರುವ ಮಹತ್ವವನ್ನು ಸಾರಿ ಹೇಳುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

    Click Here

    Call us

    Click Here

    ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಭಾನುವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಪ್ರಾಚೀನರು ಅಮೃತ ಸಮವಾದ ನೀರನ್ನು  ನೆಲದೊಳಗಿನ ನೀರು ಹಾಗೂ ನೆಲ ಮುಟ್ಟದ ನೀರು ಎಂದು ಪ್ರಮುಖವಾಗಿ ವಿಭಾಗಿಸಿದ್ದು, ಇವುಗಳಲ್ಲಿಯೂ ಹಲವಾರು ವಿಧಗಳನ್ನು ಗುರುತಿಸಿದ್ದು, ಯಾವ ನೀರಿನಿಂದ ಏನು ಪರಿಣಾಮ ಎಂಬುದಾಗಿಯೂ ವಿಶ್ಲೇಷಿಸಿದ್ದಾರೆ. ದೇವರು ಕೊಟ್ಟಂತಹ ಅತ್ಯದ್ಭುತ ಜಲವನ್ನು ನಾವಿಂದು ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿಸಿ ವಿಷವಾಗಿಸಿ ಕುಡಿಯುತ್ತಿದ್ದೇವೆ. ಹಾಗೆ ಕುಡಿದಾಗ ನೀರಿನ ಜೊತೆಗೆ ಪ್ಲಾಸ್ಟಿಕ್ ಕೂಡ ನಮ್ಮೊಳಗೆ ಸೇರುತ್ತದೆ. ಇದು ಕೆಡುಕು ಎಂಬುದನ್ನು ಆಧುನಿಕ ವಿಜ್ಞಾನವೂ ಹೇಳುತ್ತಿದೆ ಎಂದರು.

    ನೀರು ರಾಜಸ ತಾಮಸ ಗುಣಗಳನ್ನು ನಿಯಂತ್ರಿಸುವುದರ ಜೊತೆಗೆ ಹೃದಯಕ್ಕೆ ಬಲವನ್ನು ತುಂಬುತ್ತದೆ. ನೀರಿನದ್ದು ಅವ್ಯಕ್ತ ರಸವಾಗಿದ್ದು, ನೀರಿಗೆ ರುಚಿ, ಬಣ್ಣಗಳಿಲ್ಲ. ನೀರಿನ ವಿಚಾರದಲ್ಲಿ ಆಯುರ್ವೇದದಲ್ಲಿ ಅಪರಿಮಿತವಾದ ಸಂಶೋಧನೆ ನಡೆದಿದ್ದು, ಅದು ಅನುಸರಣೀಯವಾಗಿದೆ ಎಂದರು.

    ರಾಜಸ ತಾಮಸ ಕಾರ್ಯಗಳನ್ನು ಮಾಡುವವರಿಗೆ ರಾಜಸ ತಾಮಸ ಆಹಾರಗಳ ಸೇವನೆಗೆ ಭಾರತೀಯ ಪರಂಪರೆ ಅವಕಾಶವನ್ನು ಪರಿಕಲ್ಪಿಸಿದೆ. ಕ್ಷತ್ರಿಯರಿಗೆ  ಯುದ್ಧಾದಿಗಳನ್ನು ಮಾಡುವ ಕಾರ್ಯಗಳಿವೆ. ಅವರು ಯುದ್ಧದಲ್ಲಿ ಯಾರದ್ದೋ ಶಿರಸ್ಸನ್ನು ಕತ್ತರಿಸಬೇಕು ಎಂದಾದರೆ ಅವನು ರಾಜಸ ತಾಮಸ ಆಹಾರಗಳನ್ನು ಸೇವಿಸುವುದು ಅವಶ್ಯಕವಾಗಿದೆ. ಆಹಾರ ಎಲ್ಲರಿಗೂ ಒಂದನ್ನೇ ಹೇಳಿಲ್ಲ. ಗುಣ ಕರ್ಮಗಳಿಗೆ ಅನುಗುಣವಾಗಿ ಆಹಾರವನ್ನು ಭಾರತೀಯ ಪರಂಪರೆ ಸೂಚಿಸಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ದಕ್ಷಿಣ ಬೆಂಗಳೂರು ಹವ್ಯಕ ಮಂಡಲ ವಿಜಯನಗರ, ರಾಜರಾಜೇಶ್ವರಿ, ಅನ್ನಪೂರ್ಣೇಶ್ವರಿ, ಬನಶಂಕರಿ ಹವ್ಯಕ ವಲಯಗಳ ಪರವಾಗಿ ದತ್ತಾತ್ರೇಯ ಭಟ್  ಕುಟುಂಬದವರು ಗುರುಭಿಕ್ಷಾಸೇವೆ ಸಮರ್ಪಿಸಿದರು. ಕೊಣಂದೂರು ಪ್ರಕಾಶ, ಅನುರಾಧ ಪಾರ್ವತಿ, ಡಾ. ವೈ. ವಿ. ಕೃಷ್ಣಮೂರ್ತಿ, ಗುರುರಾಜ ಪಡೀಲು, ದಿನಪ್ರಧಾನರಾಗಿ ಸಿಎ. ಸಿಎಸ್. ಗೋಪಾಲಕೃಷ್ಣ ಹೆಗಡೆ ಹುಕ್ಲುಮಕ್ಕಿ ದಂಪತಿಗಳು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ:
    ಶ್ರೀಮಠಕ್ಕೆ ಪಾರಂಪರಿಕವಾಗಿ ನಡೆದುಕೊಳ್ಳುವ ಗಾಣಿಗ ಸಮಾಜದಿಂದ ಸ್ವರ್ಣಪಾದುಕಾ ಪೂಜೆ ನಡೆಯಿತು.  ಪೂಜೆ ಸ್ವೀಕರಿಸಿ ಮಾತನಾಡಿದ ಶ್ರೀಗಳು, ಗಾಣಿಗ ಸಮಾಜದ ಜೊತೆ ಶ್ರೀಮಠ ಇರಲಿದ್ದು, ಶ್ರೀಮಠಕ್ಕೆ ಆಗಾಗ ಭೇಟಿ ನೀಡುವ ಮೂಲಕ ಗುರುಶಿಷ್ಯ ಸಂಬಂಧ ಗಟ್ಟಿಯಾಗುವಂತಾಗಲಿ ಎಂದು ಹಾರೈಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕ ರವಿಶಂಕರ್‌ ಹೆಬ್ಬಾರ್ ಅವರಿಗೆ ಸನ್ಮಾನ

    07/09/2026

    ಬದುಕಿನ ಪರಿಷ್ಕಾರಕ್ಕೆ ಸಂಸ್ಕೃತ ಅಗತ್ಯ: ಆದರ್ಶ ಗೋಖಲೆ

    07/09/2026

    ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ

    07/09/2026
    Leave A Reply Cancel Reply

    eleven + 10 =

    Call us

    Click Here

    Call us

    Call us

    Call us
    Highest Viewed Recently
    • ಪ್ಲಾಸ್ಟಿಕ್‌ನಲ್ಲಿ ಸಂಗ್ರಹಿಸಿದ ನೀರು ಆರೋಗ್ಯಕ್ಕೆ ಮಾರಕ: ಶ್ರೀ ರಾಘವೇಶ್ವರ
    • ಕುಂದಾಪುರ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕ ರವಿಶಂಕರ್‌ ಹೆಬ್ಬಾರ್ ಅವರಿಗೆ ಸನ್ಮಾನ
    • ಬದುಕಿನ ಪರಿಷ್ಕಾರಕ್ಕೆ ಸಂಸ್ಕೃತ ಅಗತ್ಯ: ಆದರ್ಶ ಗೋಖಲೆ
    • ಕೋಟ ಪಂಚವರ್ಣ ಸಂಘಟನೆ ವತಿಯಿಂದ ಶಿಕ್ಷಕರ ದಿನಾಚರಣೆ, ಗುರುವಂದನೆ
    • ಮುಳ್ಳಿಕಟ್ಟೆ: ಮೀನು ಸಾಗಾಟದ ಲಾರಿ ಪಲ್ಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.